ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಹಿಜಾಬ್ ನಿಷೇಧ ವಾಪಸ್‌ಗೆ ಸೂಚನೆ ನೀಡಿದ್ದೇನೆ: ಸಿಎಂ

ಹಿಜಾಬ್ ನಿಷೇಧ ವಾಪಸ್‌ಗೆ ಸೂಚನೆ ನೀಡಿದ್ದೇನೆ: ಸಿಎಂ

Sat, 23 Dec 2023 16:17:19  Office Staff   Vb

ನಂಜನಗೂಡು: ಉಡುಪು ಅವರವರ ಇಷ್ಟ. ಹಾಗಾಗಿ ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆಯಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್‌ಎನ್ನುವುದು ಬೋಗಸ್, ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಾಗಾಗಿ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.


Share: