ಬೆಂಗಳೂರು, ಜ.೨೪: ಯುವ ಸಮುದಾಯದಲ್ಲಿ ಜೀವನ ನಿರ್ವಹಣೆಯ ವಿಶ್ವಾಸವನ್ನು ಮೂಡಿಸುವಂತಹ ವಾಣಿಜ್ಯ ವಿದ್ಯಾಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದ್ದಾರೆ.
ನಗರದಲ್ಲಿ ರಾಜ್ಯ ವಾಣಿಜ್ಯ ವಿದ್ಯಾಶಾಲೆಗಳ ಸಂಘದ ೫೦ನೆ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನ ನಿರ್ವಹಣೆ ಮಾಡುವಂತಹ, ವಿಶ್ವಾಸವನ್ನು ಮೂಡಿಸುವಂತಹ ಸುಮಾರು 1200 ವಾಣಿಜ್ಯ ವಿದ್ಯಾಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ತಿಳಿಸಿದರು.
ವಾಣಿಜ್ಯ ವಿದ್ಯಾಶಾಲೆಗಳ ಬೇಡಿಕೆಗಳ ಕುರಿತು ಸರಕಾರಕ್ಕೆ ಮಾಹಿತಿ ಸಲ್ಲಿಸಿದರೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸರಕಾರಿ ಉದ್ಯೋಗಕ್ಕೆ ಸೇರುವವರಿಗೆ ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಆಧುನಿಕ ಯುಗಕ್ಕೆ ತಕ್ಕಂತೆ ಶಾಲೆಗಳನ್ನು ಪರಿವರ್ತಿಸಿ ಶಿಕ್ಷಣ ನೀಡಬೇಕಾದ ಅಗತ್ಯವಿದೆ ಎಂದು ಸಚಿವರು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಆಟೋಮೇಷನ್ ಪುಸ್ತಕವನ್ನು ಸಚಿವರು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಎಚ್.ವಿ.ಸುಧಾಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಿರ್ದೇ ಶಕ ಶಂಕರಯ್ಯ ಸ್ವಾಮಿ, ಸಂಘದ ಗೌರವ ಕಾರ್ಯದರ್ಶಿ ಅಲ್ಲಾಭಕ್ಷ್ ಮತ್ತಿತರರು ಉಪಸ್ಥಿತರಿದ್ದರು.ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಬದ್ಧ: ಸಚಿವ ಕಾಗೇರಿ