ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / 'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

Fri, 19 Apr 2024 12:01:11  Office Staff   Vb

ಮಂಡ್ಯ: ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ವಸೂಲಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ನಗರದ ಮಂಡ್ಯ ವಿವಿ ಆವರಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಜಾಧ್ವನಿ-2 ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಈ.ಡಿ,ಐ.ಟಿ, ಸಿಬಿಐನಂತಹಸಂಸ್ಥೆಗಳನ್ನು ಬಿಟ್ಟು ಹೆದರಿಸಿ ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ.ಗಳನ್ನು ಬಿಜೆಪಿ ವಸೂಲಿ ಮಾಡಿದೆ ಎಂದು ಆರೋಪಿಸಿದರು.

ನ್ಯಾಯಾಲಯದ ಆದೇಶದಂತೆ ಚುನಾವಣಾ ಬಾಂಡ್ ಹಗರಣ ಕುರಿ ತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು ಒಂದೂವರೆ ಗಂಟೆ ಸಮಜಾ ಯಿಷಿ ನೀಡುವ ವೇಳೆ ಅವರ ಕೈ ನಡುಗು ತ್ತಿತ್ತು. ಇದನ್ನು ಜನರು ಗೂಗಲ್‌ನಲ್ಲಿ ನೋಡಬಹುದು ಎಂದು ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಇದೇ ಮಾದರಿಯಲ್ಲಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಒಕ್ಕೂಟವೂ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆ ಯಲ್ಲಿ ಅಳವಡಿಸಿಕೊಂಡಿದೆ ಎಂದರು.

ಕೇಂದ್ರದಲ್ಲಿ ತಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ, ತಿಂಗಳಿಗೆ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ.ಗಳನ್ನು ದೇಶದ ಬಡ ಕುಟುಂಬದ ಹಿರಿಯ ಮಹಿಳೆಯರ ಖಾತೆಗೆ ಜಮಾ ಮಾಡಲಿದೆ. ದಿನದ 16 ಗಂಟೆ ದುಡಿಯುವ ಮಹಿಳೆಯರಿಗೆ ಅನುಕೂಲ ಕಲ್ಪಿಸುವ ಇದು ಕ್ರಾಂತಿಕಾರಕ ಹೆಜ್ಜೆಯಾಗಲಿದೆ ಎಂದು ತಿಳಿಸಿದರು. ಅವರು ಮೋದಿ ಸರಕಾರ ಕೇವಲ 25 ಮಂದಿ ಶ್ರೀಮಂತರಿಗೆ ನಡೆಯುತ್ತಿರುವ ಸರಕಾರ. ಶ್ರೀಮಂತರ ಕೋಟ್ಯಂತರ ರೂ. ಸಾಲ ಮನ್ನಾ ಮಾಡಲಾಗುತ್ತದೆ. ಅನ್ನದಾತರ ಸಾಲಮನ್ನಾ ಮಾಡಲು ಸಾಧ್ಯವಾಗುವು ದಿಲ್ಲ ಏಕೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಿದೆ. ಬೆಳೆಗಳಿಗೆ ಸ್ವಾಮಿನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ನಿಗದಿ ಮಾಡಲಿದ್ದು, ಬೆಳೆ ವಿಮಾ ಪರಿಹಾರವನ್ನು 30 ದಿನದಲ್ಲಿ ಪಾವತಿಸಲಿದೆ ಎಂದು ಭರವಸೆ ನೀಡಿದರು.

ಡಿಪ್ಲೊಮಾ, ಪದವಿ ಮುಗಿಸಿದ ಯುವ ಜನರಿಗೆ ಮಾಸಿಕ 8,500 ರೂ. ಸಹಾಯ ಧನ ನೀಡಿ ಕೌಶಲ ತರಬೇತಿ ಕೊಡಿಸಿ ಕೆಲಸ ದೊರಕಿಸಿಕೊಡಲಾಗುವುದು. ಗುತ್ತಿಗೆ ಪದತಿ ಸಂಪೂರ್ಣ ನಿಷೇಧಿಸಿ ಸರಕಾರಿ, ಅರೆ ಸರಕಾರಿ ಇಲಾಖೆಯ ಗುತ್ತಿಗೆ ನೌಕರರನ್ನು ಖಾಯಂಗೊಳಿಸಲಾಗು ವುದು. ಆಶಾ, ಅಂಗನವಾಡಿ ಕಾರ್ಯತೆ್ರ ಯರ ವೇತನ ಹೆಚ್ಚಿಸಲಾಗುವುದು.

ಉದ್ಯೋಗ ಖಾತರಿ ಕೂಲಿಯನ್ನು 400 ರೂ.ಗೆ ಹೆಚ್ಚಿಸಿ ಯೋಜನೆಯನ್ನು ನಗರಗಳಿಗೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು. ಸಚಿವಎನ್.ಚಲುವರಾಯಸ್ವಾಮಿ, ಶಾಸಕ ರಾದ ಪಿ.ಎಂ.ನರೇಂದ್ರಸ್ವಾಮಿ, ರವಿ ಕುಮಾರ್ ಗಣಿಗ, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ, ರಮೇಶ್ ಬಂಡಿ ಸಿದ್ದೇಗೌಡ, ವೆಂಕಟೇಶ್, ರವಿಶಂಕರ್, ತಸ್ವೀರ್ ಸೇರ್, ದಿನೇಶ್ ಗೂಳಿಗೌಡ, ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ರಾಮಕೃಷ್ಣ, ರಾಜ್ಯ ಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್, ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು.


Share: