ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಹಮಾಸ್ ಉನ್ನತ ನಾಯಕನ ಹತ್ಯೆ

ಹಮಾಸ್ ಉನ್ನತ ನಾಯಕನ ಹತ್ಯೆ

Wed, 31 Jul 2024 17:15:51  Office Staff   SOnews

ಟೆಹ್ರಾನ್‌:‌ ಇರಾನ್‌ ರಾಜಧಾನಿ ಟೆಹ್ರಾನ್‌ ನಲ್ಲಿ ಬುಧವಾರ ನಡೆದ ದಾಳಿಯಲ್ಲಿ ಹಮಾಸ್‌ನ ಉನ್ನತ ನಾಯಕ ಇಸ್ಮಾಯಿಲ್ ಹನಿಯೆಹ್ ಮತ್ತು ಅವರ ಅಂಗರಕ್ಷಕರಲ್ಲಿ ಒಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.  

ಮಂಗಳವಾರ ಬೆಳಿಗ್ಗೆ ಟೆಹ್ರಾನ್ ನಲ್ಲಿರುವ ಅವರ ನಿವಾಸದ ಮೇಲೆ ನಡೆದ ವಿಶ್ವಾಸಘಾತುಕ ದಾಳಿಯಲ್ಲಿ ಇಸ್ಮಾಯಿಲ್ ಹನಿಯೆಹ್ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ.   ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಹನಿಯೆಹ್ ಇರಾನ್ ರಾಜಧಾನಿಯಲ್ಲಿದ್ದರು.


Share: