ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮೂರು ಕ್ಷೇತ್ರಗಳಲ್ಲಿ ಜಯಭೇರಿ: ಭಟ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮೂರು ಕ್ಷೇತ್ರಗಳಲ್ಲಿ ಜಯಭೇರಿ: ಭಟ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Sat, 23 Nov 2024 22:41:08  Office Staff   SOnews

ಭಟ್ಕಳ: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮೂರು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದು, ಭಟ್ಕಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ಶಮ್ಸುದ್ದೀನ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ, "ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ದಕ್ಷ ನಾಯತ್ವದಲ್ಲಿ ನಮ್ಮ ಪಕ್ಷವು ಅತ್ಯುತ್ತಮ ಪ್ರದರ್ಶನ ನೀಡಿದೆ. ಸಚಿವರಾದ ಮಂಕಾಳ್ ವೈದ್ಯರು ಪ್ರಚಾರ ಕಾರ್ಯದಲ್ಲಿ ಬಹಳಷ್ಟು ಶ್ರಮ ವಹಿಸಿದ್ದರು, ಇದರಿಂದ ಜನತೆಗೆ ನಮ್ಮ ಪಕ್ಷದ ಮೇಲಿನ ನಂಬಿಕೆ ಹೆಚ್ಚಾಗಿದೆ. ಈ ಜಯವನ್ನು ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಜನತೆಗೆ ಸಮರ್ಪಿಸುತ್ತೇವೆ" ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಮುಖಭಂಗ, ಆದರೆ ಕರ್ನಾಟಕದಲ್ಲಿ ಭರ್ಜರಿ ವಿಜಯ: ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದ್ದು ಕಾಂಗ್ರೇಸ್ ಹಾಗೂ ಅದರ ಮೈತ್ರಿಪಕ್ಷಗಳು ತೀವ್ರ ಮುಖಭಂಗ ಅನುಭವಿಸಿವೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೂರು ಉಪಚುನಾವಣಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತ ಪಕ್ಷ ತನ್ನ ಜನಮನ್ನಣೆಯನ್ನು ಕಾಪಾಡಿಕೊಂಡಿದೆ.

ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹ: ಪಟಾಕಿ ಸಿಡಿಸುವ ಮೂಲಕ ಸಂತಸ ವ್ಯಕ್ತಪಡಿಸಿದ ಕಾರ್ಯಕರ್ತರು, ರಾಜ್ಯದ ಮುಂದಿನ ರಾಜಕೀಯ ಹಾದಿಯಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಿಷ್ಠವಾಗಿ ಹೊರಹೊಮ್ಮಲು ಈ ಫಲಿತಾಂಶ ಪ್ರೇರಣೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ತಾಲೂಕ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ನಾಯ್ಕ, ಸುಧಾಕರ ನಾಯ್ಕ, ವಿಠಲ್ ನಾಯ್ಕ, ರಾಜೇಶ ನಾಯ್ಕ, ಮಂಜುನಾಥ ನಾಯ್ಕ ಮತ್ತು ಇತರ ಮುಖಂಡರು ಭಾಗವಹಿಸಿದ್ದರು.

ಈ ಜಯವು  ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಧಿಪತ್ಯವನ್ನು ಮತ್ತಷ್ಟು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

 


Share: