ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಚಿಕ್ಕಬಳ್ಳಾಪುರ: ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ

ಚಿಕ್ಕಬಳ್ಳಾಪುರ: ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ

Sun, 20 Dec 2009 03:02:00  Office Staff   S.O. News Service
ಚಿಕ್ಕಬಳ್ಳಾಪುರ, ಡಿಸೆಂಬರ್ 19: ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ೨೦೦೯-೧೦ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಉಪ್ಪಾರ ಸಮಾಜದ ಅಭಿವೃದ್ಧಿ ಕಾರ್ಯಕ್ರಮದಡಿ ಸಮುದಾಯ ಭವನ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
 
ಕಟ್ಟಡದ ಅಂದಾಜು ವೆಚ್ಚದ ಶೇಕಡ ೫೦ ರಷ್ಟು ಅಥವಾ ೫ ಲಕ್ಷ ರೂ ಮಂಜೂರು ಮಾಡಲಾಗುವುದು. ಆಸಕ್ತಿಯುಳ್ಳ ಸಂಘ ಸಂಸ್ಥೆಗಳು ಅನುದಾನ ಮಂಜೂರಾತಿಗೆ ಸೂಕ್ತ ದಾಖಲೆಗಳೊಂದಿಗೆ ನಿಗದಿತ ನಮೂನೆಯ ಅರ್ಜಿಯೊಂದಿಗೆ   ಜಿಲ್ಲಾಧಿಕಾರಿಗಳ ಶಿಫಾರಸ್ಸು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಂ.೧೬-ಡಿ, ೩ನೇ ಮಹಡಿ, ಟ್ಯಾಂಕ್ ಟೆಡ್ ಏರಿಯಾ, ವಸಂತನಗರ ಬೆಂಗಳೂರು-೫೨ ಇವರಿಗೆ ಜನವರಿ ೫ ೨೦೧೦ ರೊಳಗೆ ಸಲ್ಲಿಸಬೇಕು ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು.


Share: