Thu, 17 Oct 2024 18:02:14Office Staff
ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಶಾಲೆಗಳಲ್ಲಿ ಶಿಥಿಲಗೊಂಡಿರುವ ಶಾಲಾ ಕೊಠಡಿಗಳನ್ನು ಪರಿಶೀಲಿಸಿ, ಅವುಗಳನ್ನು ದುರಸ್ತಿಗೊಳಿಸುವ ಅಥವಾ ಹೊಸದಾಗಿ ನಿರ್ಮಿಸುವ ಮೂಲಕ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್
View more
Thu, 17 Oct 2024 04:25:10Office Staff
ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರವು ಜಲಾವೃತಗೊಂಡಿದ್ದು, ನಾಗರಿಕರ ದೈನಂದಿನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೂರು ವರ್ಷಗಳ ಹಿಂದೆ ನೆನೆಗುದಿಗೆ ಬಿದ್ದ ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ನಿವಾಸಿಗಳು ಮತ್ತೆ ಆದೇ ಪರಿಸ್ಥಿತಿಯಲ್ಲಿದ್ದಾರೆ, ಏಕೆಂದರೆ ಇಲ್ಲಿ ಸುಮಾರು 3 ಅಡಿ ನೀರು ತುಂಬಿಕೊಂಡು ಅವನತಿ ಉಂಟಾಗಿದೆ.
View more
Wed, 16 Oct 2024 21:20:16Office Staff
ಭಟ್ಕಳ: ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಅಕ್ಟೋಬರ್ 21ರಂದು ಮುಂಜಾನೆ 10 ಗಂಟೆಗೆ ಭಟ್ಕಳದ ಸಿಟಿ ಹಾಲ್, ಹೊಸ ಬಸ್ ನಿಲ್ದಾಣದ ಎದುರುಗಡೆ ಸ್ವಾಗತ ಹೋಟೆಲ್ ಪಕ್ಕದಲ್ಲಿ ಆಯೋಜಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Tue, 15 Oct 2024 19:01:04Office Staff
ಭಟ್ಕಳ: ಪ್ರವಾದಿ ಮುಹಮ್ಮದ್ (ಸ) ವಿರುದ್ದ ನಿಂದನಾತ್ಮಕ ಹೇಳಿಕೆ ನೀಡುತ್ತಿರುವ ಉತ್ತರ ಪ್ರದೇಶದ ಯತಿ ನರಸಿಂಗಾನಂದ ಸ್ವಾಮಿಜಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಟ್ಕಳದ ಸಾಮಾಜಿಕ ಹಾಗೂ ರಾಜಕೀಯ ಸಂಸ್ಥೆ ತಂಝೀಮ್ ನೇತೃತ್ವದಲ್ಲಿ ಸರ್ವಜಮಾಅತ್ ಸಂಘಟನೆಗಳು ಮಂಗಳವಾರ ಭಟ್ಕಳ ಬಂದ್ ಗೆ ಕರೆ ನೀಡಿದ್ದು, ಮುಸ್ಲಿಂ ಸಮುದಾಯದಿಂದ ಅದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲ ರೀತಿಯ ವ್ಯಾಪಾರ ವ್ಯವಹಾರಗಳು ಸ್ಥಬ್ಧಗೊಂಡಿದ್ದು, ಮುಸ್ಲಿಂ ವ್ಯಾಪಾರಿಗಳ ಸಂ
View more
Tue, 15 Oct 2024 00:55:41Office Staff
ಭಟ್ಕಳ: ಇತ್ತಿಚೆಗೆ ಉತ್ತರಪ್ರದೇಶದ ಯತಿ ನರಸಿಂಹನಂದಾ ಸರಸ್ವತಿ ಎಂಬುವವರು ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅವಹೇಳನ ಮಾಡಿದ್ದು ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಯುಎಪಿಎ ಮತ್ತು ಎನ್.ಎಸ್.ಎ ಕಾಯ್ದೆಯಡಿ ಕೂಡಲೆ ಬಂಧಿಸಬೇಕೆಂದು ಆಗ್ರಹಿಸಿ ಭಟ್ಕಳದ ನಗರ ಠಾಣೆಯಲ್ಲಿ ದೂರೊಂದು ದಾಖಲಾಗಿದೆ.
View more
Tue, 15 Oct 2024 00:53:22Office Staff
ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ಮನುಷ್ಯ ವಿರೋಧಿ ಯತಿ ನರಸಿಂಹನಂದಾ ಸರಸ್ವತಿ ಸ್ವಾಮಿಯನ್ನು ದೇಶದ್ರೋಹದ ಪ್ರಕರಣದಡಿ ಕೂಡಲೇ ಬಂಧಿಸುವಂತೆ ಆಗ್ರಹಿಸಿ ಭಟ್ಕಳದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಮಜ್ಲಿಸೆ ಇಸ್ಲಹ-ವ-ತಂಝೀಮ್ ನೇತೃತ್ವದಲ್ಲಿ ಸೋಮವಾರ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ಸಹಾಯಕ ಆಯುಕ್ತರ ಮೂಲಕ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಮೂರ್ತಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
View more
Mon, 14 Oct 2024 06:16:25Office Staff
ಭಟ್ಕಳ:ಇಲ್ಲಿನ ಸಾ್ಗರ ರಸ್ತೆಯ ತ್ಯಾಜ್ಯ ವಿಲೇವಾರಿ ಘಟಕದ ಎದುರು ಬೈಕ್ ಸವಾರರೊಬ್ಬರಿಗೆ ಕಾಡು ಹಂದಿಗಳ ಹಿಂಡು ಅಡ್ಡ ಬಂದಿದ್ದಲ್ಲದೇ ದಾಳಿ ಮಾಡಿ ಗಾಯಗೊಳಿಸಿದ ಘಟನೆ ನಡೆದಿದೆ.
View more