Tue, 01 Oct 2024 17:17:56Office Staff
ಮುಲ್ಕಿ: ಇಲ್ಲಿಗೆ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಸಮೀಪದಲ್ಲಿರುವ ಕ್ವಾಟರ್ಸ್ನಲ್ಲಿ ವಾಸ್ತವ್ಯವಿದ್ದ ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯ್ಕ ಅವರ ಪುತ್ರಿ ಉಜ್ವಲ (17) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುಲ್ಕಿ ವಿಜಯಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಉಜ್ವಲ, ಮೃತದೇಹವನ್ನು ಮನೆಯ ಎದುರಿನ ಕೋಣೆಯಲ್ಲಿ ಪೈಪಿನ ಕಬ್ಬಿಣಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಹಚ್ಚಿದ್ದಾರೆ.
View more
Mon, 30 Sep 2024 22:12:14Office Staff
ಭಟ್ಕಳ: ಭಟ್ಕಳ ತಾಲೂಕಿನ ಕಟಗಾರಕೊಪ್ಪಾ ಪ್ರದೇಶದಲ್ಲಿ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ವೈದ್ಯ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಸಾರ್ವಜನಿಕರಿಂದ ನಾನಾ ಸಮಸ್ಯೆಗಳ ಕುರಿತು 400ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಯಿತು.
View more
Mon, 30 Sep 2024 15:49:49Office Staff
ವಸತಿ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಪ್ರೊ. ಬಾಲಕೃಷ್ಣನ್ ರಾಜಗೋಪಾಲ್ ಅವರು ಅಂತರ್ ರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ದೃಷ್ಟಿಕೋನದಿಂದ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ನೆರವಾಗಲು ಬುಲ್ಡೋಜರ್ ವಿಷಯದಲ್ಲಿ ಮಧ್ಯಸ್ಥಿಕೆ ಅರ್ಜಿಯನ್ನು ಸಲ್ಲಿಸಿದ್ದಾರೆ.
View more
Mon, 30 Sep 2024 15:35:03Office Staff
ಈಗ ರದ್ದುಪಡಿಸಲಾಗಿರುವ ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ದೂರಿನ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್;ಐಆರ್ ದಾಖಲಾದ ಬಳಿಕ ಕಾಂಗ್ರೆಸ್ ರವಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ ಹಾಗೂ ಪ್ರಜಾಪ್ರಭುತ್ವವನ್ನು ಕಡೆಗಣಿಸಿರುವುದಕ್ಕೆ ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡುವಂತೆ ಆಗ್ರಹಿಸಿದೆ
View more
Sun, 29 Sep 2024 20:46:18Office Staff
ಮಾದಕ ವಸ್ತುವಿರುವ ಕೊರಿಯರ್ ನೆಪದಲ್ಲಿ ನಗರದ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತರು ಸೈಬರ್ ಕ್ರೈಂ ಬ್ರಾಂಚ್ ಪೊಲೀಸರು ಎಂದು ನಂಬಿಸಿ 35 ಲಕ್ಷ ರೂ. ವಂಚಿಸಿರುವ ಪ್ರಕರಣ ವರದಿಯಾಗಿದೆ. ಈ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
View more
Sun, 29 Sep 2024 18:59:18Office Staff
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ನ ವೈದ್ಯರು ನೀಡಿದ ಇಂಜೆಕ್ಷನ್ನ ಓವರ್ಡೋಸ್ ಕಾರಣವಾಗಿ ಬಾಲಕ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
View more
Sun, 29 Sep 2024 18:52:35Office Staff
ನೇಪಾಳದಲ್ಲಿ ನಿರಂತರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಕನಿಷ್ಠ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 60 ಜನರು ಗಾಯಗೊಂಡಿದ್ದಾರೆ ಎಂದು ನೇಪಾಳದ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಎರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ, ರಾಜ್ಯದ ಹಲವಾರು ಭಾಗಗಳು ಜಲಾವೃತಗೊಂಡಿವೆ. ಪ್ರವಾಹದ ಪರಿಣಾಮ 64 ಮಂದಿ ನಾಪತ್ತೆಯಾಗಿದ್ದಾರೆ, ಮತ್ತು ಭಾರಿ ಪ್ರಮಾಣದ ಆಸ್ತಿಪಾಸ್ತಿಗಳು ಹಾನಿಗೊಳಗಾಗಿವೆ.
View more