Tue, 23 Apr 2024 13:57:12Office Staff
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯದ ಕಾರಣ , ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಚುನಾವಣೆಗೆ ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
View more
Tue, 23 Apr 2024 13:10:24Office Staff
ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
View more
Tue, 23 Apr 2024 04:30:01Office Staff
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕಲಬುರಗಿ ತಾಲ್ಲೂಕಿನ ಪಟ್ಟಣ ಗ್ರಾಮದಿಂದ ಆಳಂದ ಮುಖ್ಯ ರಸ್ತೆಯವರೆಗೆ "ಎತ್ತಿನ ಬಂಡಿ''ಗಳ ಮೂಲಕ ಹಮ್ಮಿಕೊಳ್ಳಲಾದ ಮತದಾರರ ಜಾಗೃತಿ ಅಭಿಯಾನಕ್ಕೆ ಪಟ್ಟಣ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಭಂವರಸಿಂಗ್ ಮೀನಾ ಅವರು ಸೋಮವಾರ ಚಾಲನೆ ನೀಡಿದರು.
View more
Tue, 23 Apr 2024 04:24:57Office Staff
ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ಅಭ್ಯರ್ಥಿಗಳಲ್ಲಿ ಎಂಟು ಅಭ್ಯರ್ಥಿಗಳು ಇಂದು ನಾಮಪತ್ರ ಹಿಂಪಡೆಯಲು ನೀಡಿದ್ದ ಸಮಯದಲ್ಲಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದು, ಅಂತಿಮವಾಗಿ ಧಾರವಾಡ ಲೋಕಸಭಾ ಚುನಾವಣಾ ಸ್ಪರ್ಧೆಯಲ್ಲಿ 17 ಜನ ಅಭ್ಯರ್ಥಿಗಳು ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
View more
Tue, 23 Apr 2024 01:45:47Office Staff
ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಏಕೆ ಮಾಡಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಪ್ರಶ್ನಿಸಿದರು.
View more
Tue, 23 Apr 2024 01:40:01Office Staff
ಶಿವಮೊಗ್ಗ : ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿ ಸಿ.ಐ.ಡಿ ತನಿಖೆಗೆ ವಹಿಸಲಾಗುವುದು ಹಾಗೂ ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
View more
Tue, 23 Apr 2024 01:32:32Office Staff
ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
View more
Mon, 22 Apr 2024 12:41:44Office Staff
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ಧರ್ಮವನ್ನು ತನ್ನ ಚುನಾವಣಾ ಭಾಷಣದಲ್ಲಿ ಎಳೆದು ತರುವ ಮೂಲಕ ಪ್ರಧಾನಿಯವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆಂದು ಪ್ರತಿಪಕ್ಷಗಳು ಆಪಾದಿಸಿವೆ.
View more
Mon, 22 Apr 2024 08:33:16Office Staff
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ಹಿತ್ತಲು ಸಮುದ್ರದಲ್ಲಿ ರವಿವಾರ ಸಂಜೆ 6 ಗಂಟೆಯ ಸುಮಾರಿಗೆ ನಡೆದಿದೆ.
View more