Sun, 07 Apr 2024 01:33:38Office Staff
ಕಾರವಾರ: ವಿಧಾನಸಭಾ ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರಂಟಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಈಡೇರಿಸಿದೆ. 'ನುಡಿದಂತೆ ನಡೆದ ಕಾಂಗ್ರೆಸ್' ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೇ ಮತದಾರರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ಗೆಲ್ಲಿಸಿಕೊಡಬೇಕಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಹೇಳಿದರು.
View more
Sun, 07 Apr 2024 01:22:36Office Staff
ಭಟ್ಕಳ: ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹುರುಳಿಸಾಲಿನಲ್ಲಿರುವ ಆಹಮದ್ ಸಯೀದ್ ಜಾಮಿಯಾ ಮಸೀದಿ ಹಿಂದು-ಮುಸ್ಲಿಮ್ ಭಾವೈಕ್ಯತೆ ಮತ್ತು ಸೌಹಾರ್ದತೆಗೆ ಸಾಕ್ಷಿಯಾಗುತ್ತಿದೆ. ಕಳೆದ ೧೦-೧೫ ವರ್ಷಗಳಿಂದ ಈ ಭಾಗದಲ್ಲಿ ವಾಸವಾಗಿರುವ ಹಿಂದುಗಳೊಂದಿಗೆ ಸೇರಿಕೊಂಡು ಮಸೀದಿಯಲ್ಲಿ ಇಫ್ತಾರ್ ಕೂಟಗಳು, ಮಸೀದಿ ದರ್ಶನ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
View more
Sat, 06 Apr 2024 03:47:35Office Staff
ಮೂವತ್ತು ದಿನಗಳ ಕಠಿಣ ಉಪವಾಸ ವೃತಗಳ ಆಚರಣೆಯ ಮಾಸ ರಮಝಾನ್ ಇನ್ನೇನು ಕೊನೆಯ ಹಂತದಲ್ಲಿದೆ. ಈ ಮಾಸದ ಕೊನೆಯ ಹತ್ತು ದಿನಗಳು ದೈವಿಕ ಪ್ರತಿಫಲಕ್ಕೆ ಸಾಟಿಯಿಲ್ಲದೆ ದಿನಗಳಾಗಿವೆ. ಸಾಮಾನ್ಯವಾಗಿ ರಮಝಾನ್ ತಿಂಗಳ ೨೭ನೇ ದಿನದಂದು ಬರುವ ಲೈಲತುಲ್ ಕದ್ರ್ ರಾತ್ರಿಯು ಅತ್ಯಂತ ಶ್ರೇಷ್ಟ ಮತ್ತು ಹೆಚ್ಚೆಚ್ಚು ಪ್ರಾರ್ಥನೆಗಳು ಸ್ವೀಕರಿಸಲ್ಪಡುವ ಮತ್ತು ಅದಕ್ಕೆ ಸಾವಿರಾರು ಪಟ್ಟು ಹೆಚ್ಚು ಪ್ರತಿಫಲ ದೊರೆಯುವ ರಾತ್ರಿಯಾಗಿದೆ.
View more
Sat, 06 Apr 2024 00:36:09Office Staff
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ.
View more
Thu, 04 Apr 2024 04:11:59Office Staff
ಶಿರಸಿ: ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು.
View more
Thu, 04 Apr 2024 04:07:31Office Staff
ಸಿದ್ದಾಪುರ: ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿಕೆ ನೀಡುವ ಬಿಜೆಪಿಗರಿಗೆ ಸಂವಿಧಾನದಡಿ ನಡೆಯುವ ಚುನಾವಣೆಗೆ ಸ್ಪರ್ಧಿಸುವ ನೈತಿಕತೆಯೇ ಇಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆದ ಶಾಸಕ ಆರ್.ವಿ.ದೇಶಪಾಂಡೆ ವಾಗ್ದಾಳಿ ನಡೆಸಿದರು.
View more
Thu, 04 Apr 2024 02:13:15Office Staff
ದಿಲ್ಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಈ.ಡಿ.)ದಿಂದ ಬಂಧನಕ್ಕೆ ಒಳಗಾಗಿರುವ ಆಮ್ ಆದ್ಮ ಪಕ್ಷ (ಆಪ್)ದ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ.
View more
Thu, 04 Apr 2024 01:54:13Office Staff
ತನ್ನ ಉತ್ಪನ್ನಗಳು ಕೋವಿಡ್ -19 ಸೋಂಕುರೋಗವನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿದೆಯೆಂದು ಘೋಷಿಸಿಕೊಂಡಿದ್ದ ಪತಂಜಲಿ ಆಯುರ್ವೇದ ಸಂಸ್ಥೆಯ ವಿರುದ್ದ ಕೇಂದ್ರ ಸರಕಾರವು ಯಾಕೆ ಯಾವುದೇ ಕಾನೂನು ಕ್ರಮವನ್ನು ಕೈಗೊಂಡಿಲ್ಲವೆಂದು ಪ್ರಶ್ನಿಸಿದೆ
View more
Thu, 04 Apr 2024 01:46:05Office Staff
ವೈಜ್ಞಾನಿಕ ತಳಹದಿಯ ಔಷಧಿಗಳನ್ನು ಟೀಕಿಸುವ ಹಾಗೂ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ನಿಲ್ಲಿಸದೇ, ಕೇವಲ ಕಾಟಾಚಾರಕ್ಕೆ ನ್ಯಾಯಾಲಯಕ್ಕೆ ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ ಹಾಗೂ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಸುಪ್ರೀಂಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ
View more