Fri, 12 Jan 2024 00:18:26Office Staff
ದಾಂಡೇಲಿ: ಹಳಿಯಾಳ ತಾಲ್ಲೂಕಿನ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಹಳೆ ದಾಂಡೇಲಿಯಲ್ಲಿ ಮುಖ್ಯ ರಸ್ತೆಯಲ್ಲಿ ನೀರಿನ ಪೈಪ್ ಲೈನ ಕಾಮಗಾರಿ ಹಾಗೂ ಯುಜಿಡಿ ಪೈಪಲೈನ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು ಇದಕ್ಕಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಿದ ಪರಿಣಾಮ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ನಿತ್ಯ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಬೇಸತ್ತ ಹಳೇ ದಾಂಡೇಲಿಯ ನಿವಾಸಿಗಳು ಮಂಗಳವಾರ ನಗರದ ಪಟೇಲ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
View more
Fri, 12 Jan 2024 00:16:27Office Staff
ಭಟ್ಕಳ: ಪಟ್ಟಣದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ರಾಣಿ ಚೆನ್ನ ಭೈರಾದೇವಿ ಕೃತಿಯ ಕುರಿತು ವಿಚಾರ ಸಂಕೀರ್ಣ ಹಾಗೂ ಸ್ಥಳೀಯ ಇತಿಹಾಸದ ಕುರಿತು ವಸ್ತು ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನ- ಮಾರಾಟ ಕಾರ್ಯಕ್ರಮವು ಬುಧವಾರ ಬೆಳಿಗ್ಗೆ ಶ್ರೀ ಶ್ರೀಧರ ಸ್ವಾಮಿ ಸಭಾಂಗಣದಲ್ಲಿ ನೆರವೇರಿತು.
View more
Thu, 11 Jan 2024 19:33:50Office Staff
ಅಯೋಧ್ಯೆಯ ರಾಮ ಮಂದಿರವು ರಾಮಾನಂದ ಪಂಥಕ್ಕೆ ಸೇರಿದೆ, ಸನ್ಯಾಸಿಗಳು, ಶೈವರು ಅಥವಾ ಶಾಕ್ತರಿಗಲ್ಲ' ಎಂದು ರಾಮಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. ಅವರ ಹೇಳಿಕೆಯು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ
View more
Thu, 11 Jan 2024 04:56:14Office Staff
ಬೆಳಗಾವಿ : ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜತೆಗೆ ಸುಗಮ ಸಂಚಾರದ ದೃಷ್ಟಿಯಿಂದ ನಗರದಲ್ಲಿ ಫ್ಲೈಓವರ್ ನಿರ್ಮಿಸಲು ಉದ್ಧೇಶಿಸಲಾಗಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್ ಹೇಳಿದರು.
ಬೆಳಗಾವಿ ನಗರದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
View more
Thu, 11 Jan 2024 04:51:29Office Staff
ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಅಂತರಾಷ್ಟ್ರೀಯ ಕ್ರೀಡಾಂಗಣವನ್ನು ಜಾಗತಿಕ ಗುಣಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವದೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
View more
Thu, 11 Jan 2024 04:39:05Office Staff
ಬಳ್ಳಾರಿ : ಹಾಸಿಗೆ ಹಿಡಿದ ವಯೋವೃದ್ಧರಿಗೆ ಸೂಕ್ತ ವೈದ್ಯಕೀಯ ಉಪಚಾರ ಕೈಗೊಳ್ಳುವ ಜವಾಬ್ದಾರಿಯನ್ನು ಪಾಲಕರಿಗೆ ತಿಳಿಸುತ್ತಾ, ಅಮೃತವಾಹಿನಿ ಸಂಚಾರಿ ಆರೋಗ್ಯ ಘಟಕದ ವೈದ್ಯಕೀಯ ತಂಡವು ಮನೆ ಭೇಟಿ ಮೂಲಕ ಉಪಚಾರ ಮಾಡಿ ಅಗತ್ಯ ಔಷಧಿಗಳನ್ನು ಸ್ಥಳದಲ್ಲಿಯೇ ಒದಗಿಸಿ ಮರು ಭೇಟಿಯೊಂದಿಗೆ ಸಾಂತ್ವನ, ಧೈರ್ಯ ಹೇಳುವ ಕಾರ್ಯ ಸಂಡೂರಿನ ವೈದ್ಯಕೀಯ ತಂಡದಿಂದ ನಡೆದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ.
ಸಂಡೂರು ತಾಲ್ಲೂಕಿನ ಯಶವಂತನಗರ ಗ್ರಾಮದ ಮಾರೆಕ್ಕ ಎನ್ನುವ 70
View more
Thu, 11 Jan 2024 04:31:13Office Staff
ಬಾಗಲಕೋಟೆ : ಬಹು ಅಮೂಲ್ಯವಾದ ಜೀವ ರಕ್ಷಣೆ ಅವಶ್ಯವಾಗಿದ್ದು, ಪ್ರತಿಯೊಬ್ಬ ಬೈಕ್ ಸವಾರ ಹೆಲ್ಮೆಟ್ ಬಳಸಿ, ಕಾರು ಚಾಲಕರು ಸೀಟ್ ಬೆಲ್ಟ ಕಡ್ಡಾಯವಾಗಿ ಬಳಸಬೇಕೆಂದು ಶಾಸಕ ಎಚ್.ವಾಯ್.ಮೇಟಿ ಹೇಳಿದರು.
View more
Thu, 11 Jan 2024 00:38:58Office Staff
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ತ್ರಿಶಾ ಖಾರ್ವಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.
View more
Thu, 11 Jan 2024 00:15:04Office Staff
ಭಟ್ಕಳ: ಭಟ್ಕಳ ಪಟ್ಟಣದ ವಾರ್ಡ್ ನಂ.20 ಮತ್ತು 21ರಲ್ಲಿ ಒಳಚರಂಡಿ (ಅಂಡರ್ ಗ್ರೌಂಡ್ ಡ್ರೈನೇಜ್ ಪೈಪ್ ಲೈನ್ ಹಾಗೂ ಮ್ಯಾನ್ ಹೋಲ್) ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲದ ಕಾರಣ ಮನೆಗಳ ಬಾವಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ಭಟ್ಕಳ ಪುರಸಭೆ ಸದಸ್ಯರಾದ ಮುಲ್ಲಾ ಫಯಾಜ್ ಹಾಗೂ ಫಾತಿಮಾ ಕೌಸರ್ ಚಾಮುಂಡಿ ಆತಂಕ ವ್ಯಕ್ತಪಡಿಸಿದ್ದಾರೆ.
View more