ಕಾರವಾರ: ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸುತ್ತೋಲೆಯಂತೆ , ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ನಿಗಮ/ ಮಂಡಳಿ/ ಸ್ವಾಯತ್ತ ಸಂಸ್ಥೆಗಳು /ವಿಶ್ವವಿದ್ಯಾಲಯಗಳ ಅಧಿvಕಾರಿ/ನೌಕರರು "ಸ್ವಯಂ ಪ್ರೇರಣೆಯಿಂದ" ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವ ಕುರಿತಂತೆ, ಉತ್ತರ ಕನ್ನಡ ಜಿಲ್ಲೆಯ ಸರಕಾರಿ ನೌಕರರು ಖಾದಿ ಉಡುಪುಗಳನ್ನು ಖರೀದಿಸಲು ಅನುಕೂಲವಾಗುವಂತೆ, ಹುಬ್ಬಳ್ಳಿ ಯ ಖಾದಿ ಹುಟ್ಟುವಳಿ ಕೇಂದ್ರದಿAದ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ತಾತ್ಕಾಲಿಕ ಮಳಿಗೆಯನ್ನು ತೆರೆಯಲಾಗಿತ್ತು.
ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ ಅವರು ಮಳಿಗೆಗೆ ಭೇಟಿ ನೀಡಿ, ಸಾಂಕೇತಿಕವಾಗಿ ಸರಕಾರಿ ನೌಕರರಿಗೆ ಖಾದಿ ಉಡುಪನ್ನು ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಸರಕಾರಿ ನೌಕರರು ಅತ್ಯಂತ ಉತ್ಸಾಹದಿಂದ ಖಾದಿ ಉಡುಪುಗಳನ್ನು ಖರೀದಿಸಿದರು.
ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವ ನಾಯ್ಕ, ಉಪಾಧ್ಯಕ್ಷ ರಮೇಶ್ ನಾಯ್ಕ ಮತ್ತಿತರರು ಇದ್ದರು.