ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ

ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ

Wed, 29 May 2024 04:10:20  Office Staff   SO News

ಕಾರವಾರ : ಪ್ರಸಕ್ತ ಸಾಲಿಗೆ ಉತ್ತರ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ದಾಂಡೇಲಿ ತಾಲ್ಲೂಕಿನ ಎ ಪಿ ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಶಾಲೆ/ ಪದವಿ ಪೂರ್ವ)ಗೆ ವಿವಿಧ ವಿಷಯಗಳನ್ನು ಬೋಧಿಸಲು ಅರ್ಹ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅತಿಥಿ ಶಿಕ್ಷಕರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಎ ಪಿ ಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು -8095923300 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಾರವಾರ ದೂ.ಸಂ : 08382-220336ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: