ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಪರಿಚಿತ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವು:ಇಬ್ಬರಿಗೆ ಗಾಯ

ಅಪರಿಚಿತ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವು:ಇಬ್ಬರಿಗೆ ಗಾಯ

Sun, 26 Nov 2023 21:51:24  Office Staff   SO News

ಭಟ್ಕಳ: ತಾಲೂಕಿನ ವೆಂಕ್ಟಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಅಪರಿಚಿತ ಲಾರಿ ನಡುವೆ  ಅಪಘಾತ ಸಂಭವಿಸಿ ಓರ್ವ ಯುವತಿ ಸಾವನ್ನಪ್ಪಿ ಇಬ್ಬರು  ಗಾಯಗೊಂಡಿರುವ ಘಟನೆ ನಡೆದಿದೆ.
ಮೃತ ಯುವತಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಕಾರ್ಗಿಲ್ ನಿವಾಸಿ ಲಿಕಿತಾ ಮಹಾಬಲೇಶ್ವರ ಗೊಂಡ (23) ಎಂದು ಗುರುತಿಸಲಾಗಿದೆ. ಮೃತರನ್ನು ಲಿಕಿತಾ ಇತ್ತೀಚೆಗಷ್ಟೇ ಪದವಿ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಭಟ್ಕಳದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದರು.ಚಿಕ್ಕಮ್ಮ ಗಿರಿಜಾ ಗೊಂಡ (45) ಮತ್ತು ಸೋದರ ಸಂಬಂಧಿ ಗಣೇಶ ಗೊಂಡ (35) ಜೊತೆಯಲ್ಲಿ
ಲಿಕಿತಾ ಶಿರಾಲಿಗೆ ತೆರಳುತ್ತಿದ್ದಾಗ ವೇಗವಾಗಿ ಬಂದ ಲಾರಿ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಧ್ಯದಲ್ಲಿ ಕುಳಿತಿದ್ದ   ಲಿಕಿತಾ ಲಾರಿಯ ಚಕ್ರಕ್ಕೆ ಸಿಲುಕಿ ಪ್ರಾಣಪಕ್ಷಿ ಹಾರಿ ಹೋಗಿದರೆ.  ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಗಾಯಾಳುಗಳನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಗಿರಿಜಾ ಗೊಂಡ  ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದ್ದು. ಹೆಲ್ಮೆಟ್ ಧರಿಸಿದ್ದ ಗಣೇಶ ಗೊಂಡ ಕೈಗಳಿಗೆ ಸಣ್ಣಪುಟ್ಟ ಗಾಯದಿಂದ  ಪ್ರಾಣಾಪಾಯದಿಂದ ಪಾರಾಗಿದ್ದಾನೆ 
ಅಪಘಾತಕ್ಕೆ ಕಾರಣವಾದ ಲಾರಿ ಸ್ಥಳದಿಂದ ಪರಾರಿಯಾಗಿದೆ.
ಶಿರಾಲಿ ಚೆಕ್ ಪೋಸ್ಟ್‌ನಲ್ಲಿ ಪೊಲೀಸ್ ಸಿಬ್ಬಂದಿ ಇಲ್ಲದೆ ಕಾರಣ ಲಾರಿ ತಪ್ಪಿಸಿಕೊಳ್ಳಲು ಅನುವು ಮಾಡಿಕೊಟ್ಟಿದೆ. ಪೊಲೀಸರು ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸದಿರುವ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸ್ಥಳಕ್ಕೆ ಗ್ರಾಮಾಂತರ ಠಾಣೆ ಪಿಎಸ್‌ಐ ಮಯೂರ್‌ ಪಟ್ಟಣ ಶೆಟ್ಟಿ ಹಾಗೂ ಅವರ ತಂಡ ಭೇಟಿ ಪರಿಶೀಲನೆ ನಡೆಸಿದ್ದಾರೆ.


Share: