ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Mon, 13 Nov 2023 05:03:22  Office Staff   S O News

ಉಡುಪಿ: ತಾಲೂಕಿನ ಮಲ್ಪೆಯ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ  ಭಾನುವಾರ ನಡೆದಿದೆ. 

 ಹಸೀನಾ (46), ಅಫ್ನಾನ್ (23), ಅಜ್ಞಾಝ್ (21) ಮತ್ತು ಆಸಿಂ (12) ಮೃತ ದುರ್ದೈವಿಗಳಾಗಿದ್ದು. ಘಟನೆಯಲ್ಕಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಚೂರಿಯಿಂದ ಚುಚ್ಚಿ ಕೊಲೆಗೈದು ದುಷ್ಕರ್ಮಿ‌ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಡಾ. ಕೆ ಅರುಣ್, ಡಿವೈಎಸ್ಪಿ ದಿನಕರ್ ಹಾಗೂ ಮಲ್ಪೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ಪಿ ಡಾ. ಅರುಣ್ ಕೆ ಮಾತನಾಡಿ,  ಘಟನೆಯ  ಹಿಂದಿನ ಕಾರಣ ಪತ್ತೆ ಹಚ್ಚುತ್ತೇವೆ . ಸದ್ಯಮನೆಯೊಳಗೆ ಯಾವುದೇ ಸೊತ್ತುಗಳು ಕಳವಾದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ. ಬೆಳಿಗ್ಗೆ ಹತ್ತು ಗಂಟೆ ಹೊತ್ತಿಗೆ ನಮಗೆ ಮಾಹಿತಿ ಬಂದಿದ್ದು, ಮಾಹಿತಿ ಬಂದ ತಕ್ಷಣ ಬಂದು ಸ್ಥಳ ಪರಿಶೀಲನೆ ನಡೆಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದೇವೆ. ಕೊಲೆಗೆ ಏನು ಕಾರಣ ಎಂದು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.


Share: