ಭಟ್ಕಳ: ನಗರದ ಪ್ರತಿಷ್ಟಿತ ತರಬಿಯತ್ ಎಜ್ಯುಕೇಶನ್ ಸೂಸೈಟಿ ಯಿಂದ ನಡೆಸಲ್ಪಡುತ್ತಿರುವ ಐ.ಸಿ.ಎಸ್.ಇ ಪಠ್ಯಕ್ರಮದ ನ್ಯೂಶಮ್ಸ್ ಸ್ಕೂಲ್ ಶಾಲೆಯ ಸತತವಾಗಿ ೮ ವರ್ಷಗಳಿಂದ ಶೇ.೧೦೦ ಫಲಿತಾಂಶ ನೀಡುತ್ತಿದೆ.
ಫೆಬ್ರವರಿ ತಿಂಗಳಲ್ಲಿ ಜರುಗಿದ ೨೦೨೩-೨೪ನೇ ಸಾಲಿನ ಹತ್ತನೇ ತರಗತಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಈ ಬಾರಿಯೂ ಶೇ.೧೦೦ ಫಲಿತಾಂಶ ದಾಖಲಿಸಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ಲಿಯಾಕತ್ ಅಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟು ೮೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ೨೮ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ೩೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ. ಶೇ. ೯೭ ಅಂಕ ಪಡೆಯುವುದರ ಮೂಲಕ ಅಸ್ರಾ ಮುಅಲ್ಲಿಮ್ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ರುಖಿಯಾ ಇಫ್ಲಾಹ್ ಅಸ್ಕೆರಿ ಶೇ.೯೬%, ಅತ್ಫಾ ಸಿದ್ದೀಖಿ ಶೇ,೯೫% ಅಂಕಗಳನ್ನು ಗಳಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಸ್ಕೂಲ್ ಬೋರ್ಡ್ ಚೇರ‍್ಮನ್ ಇಂಜಿನೀಯರ್ ನಝೀರ್ ಆಹ್ಮದ್ ಖಾಝಿ, ಉಪಾಧ್ಯಕ್ಷ ಸೈಯ್ಯದ್ ಖುತುಬ್ ಬರ್ಮಾವರ್ ನದ್ವಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಅಭಿನಂದಿಸಿದ್ದಾರೆ.