ಮಂಗಳೂರು ಏಪ್ರಿಲ್ ೨೯- ಮಂಗಳೂರು ತಾಲೂಕು ಮಂಗಳೂರು -ಎ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ೩.೫.೧೦ರಂದು ಪೂರ್ವಾಹ್ನ ೧೧ ಗಂಟೆಗೆ ನಗರದ ಪುರಭವನದಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಎನ್. ಯೋಗೀಶ್ ಭಟ್ ಅವರ ಅಧ್ಯಕ್ಷತೆಯಲ್ಲಿ ಜರುಗಿಸಲಾಗುವುದು.
ಸಭೆಯಲ್ಲಿ ಸರಕಾರದ ವಿವಿಧ ಇಲಾಖೆಗಳ ವತಿಯಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಹಾಗೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ತಾಲೂಕು ತಹಸೀಲ್ದಾರ್ ಮಂಜುನಾಥ್ ಅವರು ತಿಳಿಸಿದ್ದಾರೆ.