ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಯನ ಪ್ರವಾಸ

ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಯನ ಪ್ರವಾಸ

Tue, 05 Nov 2024 00:33:52  Office Staff   S O News

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು, ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಸಮಿತಿಯ ಅಧ್ಯಕ್ಷರು ಸೇರಿದಂತೆ 20 ಜನ ಸದಸ್ಯರು 2024ನೇ ನವೆಂಬರ್ 14 ರಿಂದ 16ರ ವರೆಗೆ  ಬೆಳಗಾವಿ ವಿಭಾಗದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

ಸದರಿ ಸಮಿತಿಯು ಈ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಪ್ರಗತಿ ಕುರಿತಂತೆ ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯತ್ / ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಸಭೆ ಸೇರಿ, ಪ್ರಗತಿ ಪರಿಶೀಲನಾ ಕುರಿತು ಚರ್ಚೆ ನಡೆಸಲಿರುತ್ತದೆ. ಸಮಿತಿಯ ಅಧ್ಯಕ್ಷರು ಸೇರಿದಂತೆ ಒಟ್ಟು 20 ಜನ ಸದಸ್ಯರುಗಳು ಹಾಗೂ ಸಮಿತಿಗೆ ಸಹಕರಿಸಲು ವಿಧಾನಸಭೆ ಸಚಿವಾಲಯದ ಅಧಿಕಾರಿ/ನೌಕರರುಗಳು ಅಧ್ಯಯನ ಪ್ರವಾಸದಲ್ಲಿರುತ್ತಾರೆ.

ಸಮಿತಿಯು ಬೆಳಗಾವಿ, ಧಾರವಾಡ, ಗದಗ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿರುವ ಎಲ್ಲಾ ಇಲಾಖೆಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ  ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಗಳಡಿಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿ/ಕಲ್ಯಾಣ/ಏಳಿಗೆಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು/ವಿವಿಧ ಯೋಜನೆಗಳ ಅನುμÁ್ಠನದ ಚರ್ಚೆ ನಡೆಸಲಿದೆ ಎಂದು ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಕೆ. ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: