ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾಂಗ್ರೆಸ್ ಸರಕಾರ ನುಡಿದಂತೆ ನಡೆದು ಜನಪರ ಕಾರ್ಯಕ್ರಮ ನೀಡಿದೆ – ಬೈರತಿ ಸುರೇಶ್

ಕಾಂಗ್ರೆಸ್ ಸರಕಾರ ನುಡಿದಂತೆ ನಡೆದು ಜನಪರ ಕಾರ್ಯಕ್ರಮ ನೀಡಿದೆ – ಬೈರತಿ ಸುರೇಶ್

Sun, 26 Nov 2023 06:21:07  Office Staff   SO News

ಮಂಗಳೂರು: ರಾಜ್ಯ ನಗರಾಭಿವೃದ್ಧಿ ಸಚಿವರಾಗಿ ಬೈರತಿ ಸುರೇಶ್ ಅವರು ಮೊದಲ ಬಾರಿಗೆ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು.

ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನಮಗೆಲ್ಲರಿಗೂ ತಾಯಿ ಇದ್ದಂತೆ. ಕಾಂಗ್ರೆಸ್ ಇಲ್ಲದೆ ನಮ್ಮ ಅಸ್ಥಿತ್ವ ಇರುವುದಿಲ್ಲ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಸರಕಾರ ನೀಡಿದ್ದು, ಜನಪರವಾದ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಪಕ್ಷವನ್ನು ಕರಾವಳಿ ಪ್ರದೇಶದಲ್ಲೂ ಸಂಘಟಿಸಿ ಮಂಬರುವ ಚುನಾವಣೆಗಳನ್ನು ಗೆದ್ದು ಜನರ ಸೇವೆ ಮಾಡುವ ಅವಕಾಶ ಪಡೆದುಕೊಳ್ಳಬೇಕು ಎಂದವರು ರಮಾನಾಥ ರೈ ಅವರ ಮುಂದಾಳತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಸ್ವಂತ ಕಟ್ಟಡ ನಿರ್ಮಾಣ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಐವನ್ ಡಿಸೋಜಾ, ಜಿ.ಕೃಷ್ಣಪ್ಪ, ರಕ್ಷಿತ್ ಶಿವರಾಮ್, ಪದ್ಮರಾಜ್.ಆರ್, ಶಶಿಧರ್ ಹೆಗ್ಡೆ, ಸುರೇಶ್ ಬಳ್ಳಾಲ್, ಪ್ರವೀಣ್ ಚಂದ್ರ ಆಳ್ವ, ಶಾಲೆಟ್ ಪಿಂಟೊ, ಸುರೇಂದ್ರ ಕಂಬಳಿ, ಬೇಬಿ ಕುಂದರ್, ವಿಶ್ವಾಸ್ ದಾಸ್, ಮ.ನ.ಪಾ ಸದಸ್ಯರು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ತಿತರಿದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಉಳ್ಳಾಲ್ ಸ್ವಾಗತಿಸಿ ವಂದಿಸಿದರು.


Share: