ಭಟ್ಕಳ:೧೩,ತಾಲೂಕಿನ ಕೋಟಖಂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾದ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಸಕ ಜೆ ಡಿ ನಾಯ್ಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಮಕ್ಕಳಿಗೆ ಚಿಕ್ಕವರಿರುವಾಗಲೇ ಸಂಸ್ಕಾರಯುತವಾದ ಶಿಕ್ಷಣ ನೀಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಸರಕಾರ ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಸದ್ಭಳಕೆ ಆಗಬೇಕಿದೆ.
ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ದೊರೆತಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ ಎಂದ ಅವರು ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ಇಂತಹ ಕಾರ್ಯಕ್ರಮದಲ್ಲಿ ಪಾಲಕರು ಆಸಕ್ತಿಯಿಂದ ಪಾಲ್ಗೊಳ್ಳಬೇಕಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಜಿಪಂ ಸದಸ್ಯ ದಾಮೋದರ ಗರ್ಡಿಕರ್, ಕ್ಷೇತ್ರಶಿಕ್ಷಣಾಧಿಕಾರಿ ದೇವಿದಾಸ ಮೊಗೇರ, ಎಸ್ ವಿ ಹೆಬ್ಬಾರ, ಕೆ ಜೆ ನಾಯ್ಕ, ಎಂ ಡಿ ನಾಯ್ಕ, ಎಸ್ಡಿಎಂಸಿ ಅಧ್ಯಕ್ಷ ಕೃಷ್ಣಮೂರ್ತಿ ಹೆಗಡೆ ಮಾತನಾಡಿದರು. ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ನಿರ್ಮಲ ಮೊಗೇರ ವಹಿಸಿದ್ದರು. ವೇದಿಕೆಯಲ್ಲಿ ಮಾರೂಕೇರಿ ಜಿ ವಿಎಸ್ ಬ್ಯಾಂಕಿನ ಅಧ್ಯಕ್ಷ ಶಿವಾನಂದ ಹೆಬ್ಬಾರ, ಗ್ರಾಪಂ ಉಪಾಧ್ಯಕ್ಷೆ ರೇವತಿ ನಾಯ್ಕ, ಮಾದೇವ ನಾಯ್ಕ, ಸೋಮಶೇಖರ ನಾಯ್ಕ, ಮಾರುತಿ ನಾಯ್ಕ, ಬಸವಯ್ಯ ಗೊಂಡ ಮುಂತಾದವರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಶಾಲಾ ಮುಖ್ಯಾಧ್ಯಾಪಕ ಶಂಕರ ನಾಯ್ಕ ಸ್ವಾಗತಿಸಿದರು. ಶಿಕ್ಷಕ ಚಿದಾನಂದ ಪಟಗಾರ ಹಾಗೂ ಶಿಕ್ಷಕಿ ಭಟ್ಟ ನಿರೂಪಿಸಿದರು. ವೀಣಾ ಹೆಗಡೆ ವಂದಿಸಿದರು. ಶಾಲೆಗೆ ಸ್ಥಳ ದಾನ ನೀಡಿದವರಿಗೆ, ಶಿಕ್ಷಕರ ಸಂಘದ ಅಧ್ಯಕ್ಷ ಶಂಕರ ನಾಯ್ಕ, ಶಿಕ್ಷಕ ಚಿದಾನಂದ ಪಟಗಾರ, ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ವಿನಾಯಕ ಹೆಬ್ಬಾರರಿಗೆ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಂತರದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಯುವಕರಿಂದ ನಾಟಕ ನಡೆಯಿತು