ಮಂಗಳೂರು, ನ.೫: ಕೈಗಾರಿಕಾ ವಿದ್ಯುನ್ಮಾನ ರಸಾಯನಶಾಸ್ತ್ರ ಮತ್ತು ತಂತ್ರಜ್ಞಾನದಲ್ಲಿನ ಆವಿಷ್ಕಾರಗಳು ಕೈಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಮಾತ್ರವಲ್ಲದೆ ಸಕಲ ಕ್ಷೇತ್ರಗಳ ಅಭಿವೃದ್ಧಿಗೂ ಸಹಕಾರಿ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ನ ಸಮೂಹ ಅಧ್ಯಕ್ಷ ಬಿ.ನಾರಾಯಣ್ ಆಭಿಪ್ರಾಯ ಪಟ್ಟಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕೈಗಾರಿಕಾ ವಿದ್ಯುನ್ಮಾನ ರಸಾಯನಶಾಸ್ತ್ರ ಮತ್ತು ತಂತ್ರಜ್ಞಾನ ಎಂಬ ವಿಷಯದ ಮೂರು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮಂಗಳೂರು ವಿವಿಯ ಉಪಕುಲಪತಿ ಪ್ರೊ.ಕೆ.ಎಂ. ಕಾವೇರಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಪಾನ್ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಮೆಟೇರಿಯಲ್ ಸೈನ್ಸ್ನ ಪ್ರೊ.ಹಿಡಿಯಾಪಿಮುರತಾ, ವಿಪಿಇಸಿಇಆರ್ಐನ ನಿರ್ದೇಶಕ ಯಜ್ಞರಾಮನ್ ಮತ್ತಿತರರು ಸಂದರ್ಭದಲ್ಲಿ ಉಪಸ್ಥಿತರಿದ್ದರು.