ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

Tue, 30 Apr 2024 05:57:24  Office Staff   S O News

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಮೇ ತಿಂಗಳಲ್ಲಿ 30 ದಿನಗಳ ಘರೇಲು ವಿದ್ಯುತ್ ಉಪಕರಣ ಸೇವಾ ಉದ್ಯಮ (ಹೌಸ್ ವೈರಿಂಗ್ ) ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಮೇ 5 ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿAದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9980510717, 948385489 ನ್ನು ಸಂಪರ್ಕಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: