ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಟಿವಿ ರಿಪೇರಿ ತರಬೇತಿ

ಕಾರವಾರ: ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಟಿವಿ ರಿಪೇರಿ ತರಬೇತಿ

Tue, 07 Nov 2023 04:00:41  Office Staff   S O News

ಕಾರವಾರ:  ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಡಿಸೆಂಬರ್ ತಿಂಗಳಿನಲ್ಲಿ 30 ದಿನಗಳವರೆಗೆ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಟಿವಿ ರಿಪೇರಿ ತರಬೇತಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುತ್ತದೆ.

ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ : 9980510717, 8217236973, 9482188780, 9483485489 ನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.
 


Share: