ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ರಾಜೀವ್ ಗಾಂದಿ ಮಕ್ಕಳ ಕಲ್ಯಾಣ ಸೇವಾ ಪ್ರಶಸ್ತಿಗೆ ಅರ್ಜಿ ಅಹ್ವಾನ

ರಾಜೀವ್ ಗಾಂದಿ ಮಕ್ಕಳ ಕಲ್ಯಾಣ ಸೇವಾ ಪ್ರಶಸ್ತಿಗೆ ಅರ್ಜಿ ಅಹ್ವಾನ

Mon, 03 May 2010 16:11:00  Office Staff   S.O. News Service
ಬೆಂಗಳೂರು, ಮೇ 3 : ಭಾರತ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣಕ್ಕಾಗಿ ಉತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಗುರುತಿಸಿ ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿಯನ್ನು 3 ವ್ಯಕ್ತಿಗಳಿಗೆ ನೀಡಿ ಗೌರವಿಸುತ್ತದೆ.

ಈ ಪ್ರಶಸ್ತಿಯನ್ನು ಪ್ರತಿ ವರ್ಷ ದಿ. ರಾಜೀವ್ ಗಾಂಧಿಯವರ ಜನ್ಮ ದಿನವಾದ ಆಗಸ್ಟ್ 20ರಂದು ಆಯ್ಕೆಯಾದ ವ್ಯಕ್ತಿಗಳ ಹೆಸರನ್ನು ಘೋಷಿಸಿ ಪ್ರದಾನ ಮಾಡಲಾಗುವುದು. ಪ್ರತಿ ಪ್ರಶಸ್ತಿಯು ರೂ 1 ಲಕ್ಷ ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ.

ಈ ಪ್ರಶಸ್ತಿಗಾಗಿ ಆಯ್ಕೆ ಮಾಡುವ 3 ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ಧಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕೆಲಸವನ್ನು ನಿರ್ವಹಿಸಿರಬೇಕು. ಸಂಘ ಸಂಸ್ಥೆಗಳಲ್ಲಿ ಸಂಬಳ ಪಡೆಯುತ್ತಿರುವ ಅಧಿಕಾರಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿಗಾಗಿ ಆಯ್ಕೆ ಮಾಡಲು ಇರುವ ಒಂದೇ ಮಾನದಂಡ-ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಮಾಡಿರುವ ಗುಣಮಟ್ಟದ ಕೆಲಸ.

ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟಿರುವ ಸಮಿತಿಯು ಮೇಲೆ ತಿಳಿಸಿರುವ ಪ್ರಶಸ್ತಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ.

2010ನೇ ವರ್ಷದ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಆಯಾ ಜಿಲ್ಲಾ ಕಚೇರಿಗಳಿಂದ ಪಡೆದು ಆಂಗ್ಲ ಭಾಷೆಯಲ್ಲಿ ತ್ರಿಪ್ರತಿಯಲ್ಲಿ ಭರ್ತಿಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಗೆ ಮೇ 10ರೊಳಗೆ ತಲುಪಿಸಬೇಕು.

 

  

Share: