ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಚುನಾವಣಾ ಕರ್ತವ್ಯಗಳ ಬಗ್ಗೆ ತಿಳಿದಿರಲಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ: ಚುನಾವಣಾ ಕರ್ತವ್ಯಗಳ ಬಗ್ಗೆ ತಿಳಿದಿರಲಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Sun, 07 Jan 2024 03:24:25  Office Staff   S O News

ಕಾರವಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪಾರದರ್ಶಕ, ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯನ್ನು ನಡೆಸುವ ಕುರಿತಂತೆ ಪ್ರತಿಯೊಬ್ಬರು ನೋಡಲ್ ಅಧಿಕಾರಿಗಳಿಗೂ ತಾವು ನಿರ್ವಹಿಸಬೇಕಾದ ಚುನಾವಣಾ ಕರ್ತವ್ಯಗಳ ಕುರಿತಂತೆ ಸಂಪೂರ್ಣ ಮಾಹಿತಿ ಇರಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

 ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಲೋಕಸಭಾ ಚುನಾವಣೆ ಕುರಿತಂತೆ ಚುನಾವಣಾ ಆಯೋಗ ನೀಡುವ ಮಾರ್ಗಸೂಚಿಗಳನ್ನು ಅರ್ಥೈಸಿಕೊಂಡು ಅದರಂತೆಯೇ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಈ ಹಿಂದೇ ಎಷ್ಟೇ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರೂ ಸಹ ಹೊಸದಾಗಿ ಚುನಾವಣಾ ಕರ್ತವ್ಯ ನಿರ್ವಹಿಸುವ ರೀತಿಯಲ್ಲಿ ಅತ್ಯಂತ ಜವಾಬ್ದಾರಿಯಿಂದ ತಮಗೆ ನೀಡಿರುವ ಆದೇಶಗಳನ್ನು ಪಾಲಿಸಬೇಕು. ಕಚೇರಿಯಲ್ಲಿ ವಾಹನಗಳು, ಕಂಪ್ಯೂಟರ್‌ಗಳು, ಇಂಟರ್ನೆಟ್ ವ್ಯವಸ್ಥೆ, ಮತ್ತು ಸಿಬ್ಬಂದಿಗಳ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು.

 ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಕರ್ತವ್ಯಕ್ಕಾಗಿ, ಜಿಲ್ಲಾ ಸ್ವೀಪ್ ಸಮಿತಿಗೆ ಮತ್ತು ಎಂಸಿಸಿ ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕಾನೂನು ಪಾಲನೆ ಮತ್ತು ಸುರಕ್ಷತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮಾನವ ಸಂಪನ್ಮೂಲ ನಿರ್ವಹಣೆಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ತರಬೇತಿ ಕಾರ್ಯಕ್ರಮಗಳಿಗೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ, ಚುನಾವಣಾ ಸಾಮಗ್ರಿಗಳ ನಿರ್ವಹಣೆಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ವಾಹನಗಳ ವ್ಯವಸ್ಥೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ, ತಾಂತ್ರಿಕ ಕಾರ್ಯಗಳ ನಿರ್ವಹಣೆಗೆ ಎನ್.ಐ.ಸಿ. ಯ ಜಿಲ್ಲಾ ಮಾಹಿತಿ ಅಧಿಕಾರಿ,ಇವಿಎಂ ಗಳ ನಿರ್ವಹಣೆಗೆ ಕಾರವಾರ ನಗರಸಭೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ವೆಚ್ಚ ಪರಿಶೀ¯ನೆಗೆ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ, ಅಂಚೆ ಮತಪತ್ರ ಮತ್ತು ಇಟಿಪಿಬಿಎಸ್ ನಿರ್ವಹಣೆಗಾಗಿ ಉಪ ನಿರ್ದೇಶಕರು ಶಿಕ್ಷಣ ಇಲಾಖೆ, ಮಾಧ್ಯಮ ನಿರ್ವಹಣೆಗಾಗಿ ಜಿಲ್ಲಾ ವಾರ್ತಾಧಿಕಾರಿ, ಸಂವಹನ ವ್ಯವಸ್ಥೆಗಾಗಿ ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶÀಕರು, ಮತದಾರರ ಪಟ್ಟಿಯ ಪರಿಶೀಲನೆಗೆ ಕ್ರಿಮ್ಸ್ನ ಆಡಳಿತಾಧಿಕಾರಿ, ಮತದಾರರ ದೂರುಗಳು ಹಾಗೂ ಸಹಾಯವಾಣಿಯ ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕರು, ಚುನಾವಣಾ ವೀಕ್ಷಕರ ಉಸ್ತುವಾರಿಗೆ ನಗರಸಭೆಯ ಪೌರಾಯುಕ್ತರು, ವಿಶೇಷ ಚೇತನ ಮತದಾರರ ಕುರಿತಂತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿಯನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸಿದ ಜಿಲ್ಲಾಧಿಕಾರಿಗಳು ಎಲ್ಲರಿಗೂ ಅವರ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿ, ತಮ್ಮ ಕರ್ತವ್ಯಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಂಡು, ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

 ಮತದಾರರ ಪಟ್ಟಿಗೆ ಹೊಸದಾಗಿ ನೊಂದಣಿ,ತಿದ್ದುಪಡಿ, ತೆಗೆದುಹಾಕುವಿಕೆ ಕುರಿತಂತೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗಧಿತ ಕಾಲಾವಧಿಯೊಳಗೆ ವಿಲೇವಾರಿ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಚುನಾವಣಾ ಕರ್ತವ್ಯದಲ್ಲಿ ಎಲ್ಲಾ ನೋಡಲ್ ಅಧಿಕಾರಿಗಳು ಪರಸ್ಪರ ನಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರeಪೂತ್ೆ, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ, ಎ.ಎಸ್ಪಿ. ಜಗದೀಶ್ ನಾಯಕ್ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಸಿರುವ ಎಲ್ಲಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.


Share: