ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಚೆಕ್ ಪೋಸ್ಟ್ ತಪಾಸಣೆಯಲ್ಲಿ ಲೋಪವಾದರೆ ಸಿಬ್ಬಂದಿಗಳ ವಿರುದ್ದ ಕ್ರಮ: ಜಿಲ್ಲಾಧಿಕಾರಿ.

ಕಾರವಾರ: ಚೆಕ್ ಪೋಸ್ಟ್ ತಪಾಸಣೆಯಲ್ಲಿ ಲೋಪವಾದರೆ ಸಿಬ್ಬಂದಿಗಳ ವಿರುದ್ದ ಕ್ರಮ: ಜಿಲ್ಲಾಧಿಕಾರಿ.

Thu, 11 Apr 2024 19:07:01  Office Staff   S O News

ಕಾರವಾರ:- ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬದಿಸಿದತೆ, ಜಿಲ್ಲೆಯಲ್ಲಿ ಏಪ್ರಿಲ್ 12 ರಿಂದ ನಾಮಪತ್ರಗಳ ಸಲ್ಲಿಕೆ ಆರಂಭಗೊಳ್ಳಲಿದ್ದು, ನಂತರದಲ್ಲಿ ಹೆಚ್ಚಿನ ಅಕ್ರಮಗಳು ನಡೆಯುವ ಸಾಧ್ಯತೆಗಳಿದ್ದು, ಈ ಕುರಿತಂತೆ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣಾ ಕಾರ್ಯ ಕೈಗೊಳ್ಳಬೇಕು, ಇದರಲ್ಲಿ ಲೋಪವಾದಲ್ಲಿ ಸಂಬ0ದಪಟ್ಟ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಎಚ್ಚರಿಕೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಇದುವರೆಗೆ ಚುನಾವಣಾ ಅಕ್ರಮಗಳ ಕುರಿತು ವಶಪಡಿಸಿಕೊಂಡಿರುವ ವಸ್ತುಗಳ ಪ್ರಮಾಣ ಕಡಿಮೆಯಿದ್ದು , ಚೆಕ್ ಪೋಸ್ಟ್ ಗಳಲ್ಲಿ ಇನ್ನೂ ಹೆಚ್ಚಿನ ತಪಾಸಣೆ ಅತ್ಯಗತ್ಯವಾಗಿದೆ ಜಿಲ್ಲೆಗೆ ಈಗಾಗಲೇ ಚುನಾವಣಾ ವೀಕ್ಷಕರುಗಳ ನೇಮಕವಾಗಿದ್ದು, ಅವರೂ ಕೂಡ ಈ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದರು.

ಚೆಕ್ ಪೋಸ್ಟ್ಗಳಿಗೆ ತಾನು ಅನೀರೀಕ್ಷಿತ ಭೇಟಿ ಕಾರ್ಯಕ್ರಮಗಳನ್ನು ನಡೆಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಸಹ ಭೇಟಿ ನೀಡಿ ತಪಾಸಣೆ ನಡೆಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ವಿತರಿಸಿರುವ 12ಡಿ ಫಾರಂ ಗಳ ಕುರಿತಂತೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಯಾವುದೇ ಅರ್ಜಿಗಳು ಬಾಕಿ ಉಳಿಯದಂತೆ ವಿಲೇವಾರಿ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಸಹಾಯಕ ಚುನಾವಣಾಧಿಕಾರಿ ಸ್ಟೆಲ್ಲಾ ವರ್ಗಿಸ್ ಹಾಗೂ ಅಂಚೆಪತ ಪತ್ರದ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.


Share: