ಕಾರವಾರ: ತೋಟಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ಸಿದ್ದಾಪುರ ತಾಲೂಕಿನ ಬೀಳಗಿ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ನ.5 ರಿಂದ 4 ಫೆಬ್ರವರಿ 2025 ರವರೆಗೆ ರೈತ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ), ಶಿರಸಿ ಅಥವಾ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ), ಕಾರವಾರ ರವರ ಕಛೇರಿಯಲ್ಲಿ ಅಥವಾ https://horticulturedir.karnataka.gov.in ಮೂಲಕ ಅ.21 ರಿಂದ ಅ.25 ರೊಳಗಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಶಿರಸಿಯ ತೋಟಗಾರಿಕೆ ಉಪನಿರ್ದೇಶಕರ ಕಛೇರಿಗೆ ಅ.28 ರೊಳಗಾಗಿ ಸಲ್ಲಿಸಬೇಕು.
ಉತ್ತರ ಕನ್ನಡ ಜಿಲ್ಲೆಯ ಪ.ಜಾತಿಯ 1 ಅಭ್ಯರ್ಥಿ ಹಾಗೂ ಇತರೆ ವರ್ಗದ 2 ಅಭ್ಯರ್ಥಿಗಳನ್ನು ನಿಯಮಾನುಸಾರ ತರಬೇತಿಗೆ ಆಯ್ಕೆ ಮಾಡಲಾಗುವುದು, ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವತೆ ಶಿರಸಿಯ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ