ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ತರಬೇತಿ ಕಾರ್ಯಗಾರಕ್ಕೆ ಚಾಲನೆ

ಕಾರವಾರ: ತರಬೇತಿ ಕಾರ್ಯಗಾರಕ್ಕೆ ಚಾಲನೆ

Sun, 16 Jun 2024 05:54:20  Office Staff   S O News

ಕಾರವಾರ: ಕಾರವಾರ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಇಂದು ಕುಡಿಯುವ ನೀರು ಗುಣಮಟ್ಟ ಪರೀಕ್ಷೆ ಮತ್ತು ಕಾಮಗಾರಿಗಳ ಅಂದಾಜು ಪತ್ರಿಕೆ ಸಿದ್ಧಪಡಿಸುವ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಶಾಸಕ ಸತೀಶ್ ಕೆ.ಸೈಲ್ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು. 

ನಂತರ ಮಾತನಾಡಿದ ಅವರು ಮನುಷ್ಯನಿಗೆ ಮುಖ್ಯವಾದದ್ದು ನೀರು, ವಿದ್ಯುತ್, ಸಾರಿಗೆ ಈ ಮೂರು ವಿಭಾಗಗಳು ಅತಿ ಮುಖ್ಯ ಅದರಲ್ಲಿ ನೀರು ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ ಅಂತಹದರಲ್ಲಿ ಕಲುಷಿತವಾದಂತಹ ನೀರು ಜನರು ಸೇವಿಸಬಾರದು ಎನ್ನುವಂತಹ ಮುಖ್ಯ ಉದ್ದೇಶದಿಂದ ಈ ತರಬೇತಿ ಆಯೋಜಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಮಾತನಾಡಿ, ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮಳೆ ಬರುತ್ತಿರುವುದರಿಂದ ನೀರಿಗೆ ಸಂಬAಧಿಸಿದ ರೋಗಗಳು ಹರಡದಂತೆ, ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪರೀಕ್ಷೆಗಾಗಿ ಈಗಾಗಲೇ ಎಫ್.ಟಿ.ಕೆ ಕಿಟ್ ವಿತರಣೆ ಮಾಡಲಾಗಿದೆ ಅವುಗಳನ್ನು ಬಳಸಿಕೊಂಡು ಕುಡಿಯುವ ನೀರಿನ ಗುಣಮಟ್ಟವನ್ನು ಪರೀಕ್ಷೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರಿಗೆ ಎಫ್.ಟಿ.ಕೆ ಕಿಟ್ ಬಳಸಿಕೊಂಡು ಕುಡಿಯುವ ನೀರಿನ ಗುಣಮಟ್ಟವನ್ನು ಹೇಗೆ ಪರೀಕ್ಷೆ ಮಾಡಬೇಕು ಎನ್ನುವುದರ ಬಗ್ಗೆ ಪ್ರಯೋಗಾತ್ಮಕ ತರಬೇತಿಯಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಆಡಳಿತ) ನಾಗೇಶ್ ರಾಯ್ಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ, ಕಾರ್ಯಪಾಲಕ ಅಭಿಯಂತರ ರಾಜೀವ್ ನಾಯ್ಕ, ಸಹಾಯಕ ಕಾರ್ಯಪಾಲಕ ಅಭಿಯಂತರ (KUWS)ಎಸ್.ಪಿ.ಬಾಂದೇಕರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಸತೀಶ್, ಜಿಲ್ಲಾ ಪಂಚಾಯಿತಿಯ WASH PMU  ಸಮಾಲೋಚಕರು, ಸಂಪನ್ಮೂಲ ವ್ಯಕ್ತಿಗಳು ಮತ್ತಿತರರು ಹಾಜರಿದ್ದರು.


Share: