ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಪೂರಕ ಪೌಷ್ಠಿಕ ಆಹಾರದ ಕುರಿತು ಅರಿವು ಕಾರ್ಯಕ್ರಮ

ಕಾರವಾರ: ಪೂರಕ ಪೌಷ್ಠಿಕ ಆಹಾರದ ಕುರಿತು ಅರಿವು ಕಾರ್ಯಕ್ರಮ

Sat, 14 Sep 2024 06:10:43  Office Staff   S O News

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಮಾಸಾಚರಣೆ ಅಂಗವಾಗಿ ಶುಕ್ರವಾರ ಕಾರವಾರದ ಬಿಣಗಾ ಒಕ್ಕಲಕೇರಿ ಅಂಗನವಾಡಿ ಕೇಂದ್ರದಲ್ಲಿ ಪೂರಕ ಪೌಷ್ಠಿಕ ಆಹಾರದ ಕುರಿತು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಉದ್ಘಾಟಿಸಿದರು.

ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರಿಯಾದ ಸಮಯಕ್ಕೆ ಪೂರಕ ಪೌಷ್ಠಿಕ ಆಹಾರದ ಸೇವನೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸೀಮಂತ ಮತ್ತು ಅನ್ನಪ್ರಾಶನ ಕಾರ್ಯಕ್ರಮವನ್ನು ನಡೆಸಿ ಅದರ ಮಹತ್ವವನ್ನು ವಿವರಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋನಲ್ ಎಸ್. ಐಗಾಳ್, ಮಕ್ಕಳ ಪಾಲನೆ, ಪೋಷಣೆ, ರಕ್ಷಣೆಯ ಕುರಿತು ಮಾತನಾಡಿ, ನಮ್ಮ ಸಮಾಜವನ್ನು ಬಾಲ್ಯವಿವಾಹ ಮುಕ್ತವನ್ನಾಗಿಸೋಣ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರೂಪಾಕ್ಷ ಗೌಡ ಪಾಟೀಲ ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಠಿಕ ಆಹಾರ ಸೇವನೆಯ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಶ್ವೇತಾ ನಾಯ್ಕ, ಪ್ರಕಾಶ್ ಪಿ. ನಾಯ್ಕ, ಸ್ತ್ರೀಯ ಶಕ್ತಿ ಸಂಘದ ಪ್ರತಿನಿಧಿ ಮಂಗಲಾ ಗೌಡ, ಶಾಲಾ ಶಿಕ್ಷಕರು, ಬಾಳ್ವಿಕಾಸ ಸಮಿತಿಯ ಸದಸ್ಯರು, ಸ್ತ್ರೀಯ ಶಕ್ತಿ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು, ಹಿರಿಯ ಆರೋಗ್ಯ ಮಹಿಳಾ ಸಹಾಯಕರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಮಕ್ಕಳ ಪಾಲಕರು, ಊರ ನಾಗರಿಕರು ಮತ್ತು ಕಾರವಾರ-3 ವಲಯದ ಅಂಗನವಾಡಿ ಕಾರ್ಯಕರ್ತೆಯರು, ಪೋಷಣಾ ಅಭಿಯಾನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬಗೆಯ ಪೂರಕ ಪೌಷ್ಠಿಕ ಆಹಾರವನ್ನು ತಯಾರಿಸಿ ಪ್ರದರ್ಶಿಸಿದರು.


Share: