ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ

ಕಾರವಾರ: ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ

Fri, 12 Jan 2024 06:43:05  Office Staff   S O News

ಕಾರವಾರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್& ಡಿಎಆರ್) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜ.28 ರಂದು ಬೆಳಿಗ್ಗೆ 11 ರಿಂದ 12-30 ರವರೆಗೆ ನಡೆಯಲಿದೆ.

 ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಹಾಗೂ ಕರೆಪತ್ರ ಲಿಂಕ್‌ನ್ನು ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ನಿಗದಿತ ದಿನಾಂಕದAದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: