ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಭಾವಗೀತೆ ಸ್ಪರ್ಧೆಯಲ್ಲಿ ಕು. ಸಾಯಿಶ್ರೀ ಶೇಟ್ ಜಿಲ್ಲೆಗೆ ಪ್ರಥಮ

ಕಾರವಾರ: ಭಾವಗೀತೆ ಸ್ಪರ್ಧೆಯಲ್ಲಿ ಕು. ಸಾಯಿಶ್ರೀ ಶೇಟ್ ಜಿಲ್ಲೆಗೆ ಪ್ರಥಮ

Sat, 02 Dec 2023 05:30:33  Office Staff   S O News

ಕಾರವಾರ: ಕರ್ನಾಟಕ ರಾಜ್ಯ ಕ್ಷೇಮಾಭಿವೃದ್ಧಿ ನಿಧಿ, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಪ್ರೀಮಿಯರ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕøತಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕಾರವಾರದ ವಿದ್ಯಾರ್ಥಿನಿ ಕು. ಸಾಯಿಶ್ರೀ ಸಂತೋಷ ಶೇಟ್ ಇವಳು ಭಾವಗೀತೆ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ, ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುತ್ತಾಳೆ.

ಇವಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.


Share: