ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಮತದಾನ ಜಾಗೃತಿ ಜಾಥಾ

ಕಾರವಾರ: ಮತದಾನ ಜಾಗೃತಿ ಜಾಥಾ

Sun, 21 Apr 2024 01:18:30  Office Staff   S O News

ಕಾರವಾರ: ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ಎಲ್ಲರೂ ಮತದಾನಲ್ಲಿ ಪಾಲ್ಗೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯಾ ನಾಯ್ಕ ತಿಳಿಸಿದರು.

ಅವರು ಇಂದು ಸಿದ್ದಾಪುರ ತಾಲೂಕಿನಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಜಾಗೃತಿ ನೀಡಲು ನರೇಗಾ ಕೂಲಿಕಾರರ ಸಮ್ಮುಖದಲ್ಲಿ ಗ್ರಾಮದಲ್ಲಿ ಜಾಗ್ರತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನಮನೆ ಗ್ರಾಮ ಪಂಚಾಯತ್‌ನ ಮಳಲವಳ್ಳಿ ಗ್ರಾಮದಲ್ಲಿ ಕೆರೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳದಿಂದ ಗ್ರಾಮದ ಬೀದಿಗಳಲ್ಲಿ ಹಾಡು ಹಾಗೂ ಘೋಷಣೆಗಳ ಮೂಲಕ ಅರಿವು ಮೂಡಿಸಲಾಯಿತು.

ತಾಲೂಕು ಪಂಚಾಯತ್ ವ್ಯವಸ್ಥಾಪಕ ಮಹಮ್ಮದ್ ರಿಯಾಜ್ ಪ್ರತಿಜ್ಞಾ ವಿಧಿ ಬೋಧಿಸಿದರು. ತಾಲೂಕು ಪಂಚಾಯತ್ ಯೋಜನಾಧಿಕಾರಿ ಬಸವರಾಜ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಟರಾಜ್, ತಾ.ಪಂ ಹಾಗೂ ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.


Share: