ಚಿಕ್ಕಬಳ್ಳಾಪುರ ಡಿಸೆಂಬರ್ ೦೧: ಜಿಲ್ಲಾ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಿದ್ದು. ಈ ಪರಿಶೀಲನಾ ಪಟ್ಟಿಯಲ್ಲಿರುವವರು ಡಿಸೆಂಬರ್ ೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಕಛೇರಿಗೆ ಖುದ್ದಾಗಿ ಮೂಲ ದಾಖಲೆಗಳೊಂದಿಗೆ ಹಾಗೂ ದಾಖಲೆಗಳ ಎರಡು ದೃಢೀಕೃತ ಪ್ರತಿಗಳೊಂದಿಗೆ ಹಾಜರಾಗಲು ತಿಳಿಸಿದ್ದಾರೆ.
ತಾತ್ಕಾಲಿಕ ಪರಿಶೀಲನಾ ಪಟ್ಟಿ ಹಾಗೂ ಮೂಲ ದಾಖಲೆಗಳನ್ನು ಹಾಜರುಪಡಿಸುವ ಬಗ್ಗೆ ವೆಬ್ ಸೈಟ್ ನಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಛೇರಿ, ಉಪವಿಭಾಗಾಧಿಕಾರಿಗಳ ಕಛೇರಿ, ಉಪವಿಭಾಗ ಮತ್ತು ಸಂಬಂಧಪಟ್ಟ ತಾಲ್ಲೂಕು ಕಛೇರಿಯ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಪರಿಶೀಲನಾ ಪಟ್ಟಿಯ ಬಗ್ಗೆ ಆಕ್ಷೇಪಣೆ ಇದ್ದವರು ಡಿಸೆಂಬರ್ ೧೪ ರ ಸಂಜೆ ೫ ಗಂಟೆಯ ಒಳಗಡೆ ಅಧ್ಯಕ್ಷರು, ಗ್ರಾಮಲೆಕ್ಕಾಧಿಕಾರಿಗಳ ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು, ಚಿಕ್ಕಬಳ್ಳಾಪುರ ಜಿಲ್ಲೆ, ರವರಲ್ಲಿ ಅಗತ್ಯ ದಾಖಲೆಗಳೊಂದಿಗೆ ಮನವಿ ಸಲ್ಲಿಸತಕ್ಕದ್ದು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಅನ್ವರ್ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-