ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಾರವಾರ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Sun, 06 Oct 2024 00:06:23  Office Staff   S O News

ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ. ವರ್ಗ ಸೇರಿದ ವಿದ್ಯಾರ್ಥಿಗಳಿಂದ 2024-25 ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ. ಹಾಗೂ ಎಸ್.ಟಿ ರೂ. 2 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ರೂ 1 ಲಕ್ಷ ದೊಳಗಿರಬೇಕು.

ವಿದ್ಯಾರ್ಥಿಗಳು https://shp.karnataka.gov.in/bcwd  ಮೂಲಕ ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕವಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/bcwd  ಅನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಮತ್ತು ದೂ.ಸಂ. 08382-226588 ನ್ನು ಸಂಪರ್ಕಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.


Share: