ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಕಾರವಾರ: ಜರಿವಾಡ ಗುಡ್ಡ ಕುಸಿತ - ಮೃತರ ಕುಟುಂಬಗಳಿಗೆ ಒಂದು ಲಕ್ಷ ರೂ. ಪರಿಹಾರ - ನಾಗರಾಜ ಶೆಟ್ಟಿ

ಕಾರವಾರ: ಜರಿವಾಡ ಗುಡ್ಡ ಕುಸಿತ - ಮೃತರ ಕುಟುಂಬಗಳಿಗೆ ಒಂದು ಲಕ್ಷ ರೂ. ಪರಿಹಾರ - ನಾಗರಾಜ ಶೆಟ್ಟಿ

Wed, 07 Oct 2009 03:19:00  Office Staff   S.O. News Service
ಉಡುಪಿ, ಅ.೬: ಕಾರವಾರದ  ಝರಿವಾಡಾದಲ್ಲಿ ಗುಡ್ಡ ಕುಸಿದು ಸಂಭವಿಸಿರುವ ದುರಂತದಲ್ಲಿ ಮೃತಪಟ್ಟಿರುವ ಪ್ರತಿಯೊಂದು ಕುಟುಂಬದವರಿಗೂ ಸರಕಾರದಿಂದ ಒಂದು ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗರಾಜ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಂತ್ರಸ್ತ ಕುಟುಂಬಗಳಿಗೆ ಪರಿಹಾರ, ಮನೆ ನಿರ್ಮಾಣ ಹಾಗೂ ಭವಿಷ್ಯ ಬಗ್ಗೆ ಚಿಂತನೆ ನಡೆಸುವ ನಿಟ್ಟಿನಲ್ಲಿ ಕಾರವಾರ ಉಸ್ತುವಾರಿ ಸಚಿವರು, ಶಾಸಕರು, ಸಂಸದರ ಸಭೆ ಕರೆದು ಚರ್ಚಿಸಲಾಗಿದೆ. ಮುಖ್ಯಮಂತ್ರಿಯ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಹಲವು ಸಂಘಟನೆಗಳಿಗೆ ಹಾಗೂ ಕಂಪೆನಿಗಳಿಗೆ ಮನವಿ ಮಾಡಲಾಗಿದೆ. ತನ್ನ ಒಂದು ತಿಂಗಳ ಸಂಬಳವನ್ನು ನಿಧಿಗೆ ನೀಡಲಾಗುವುದು ಎಂದರು.

ಮೃತದೇಹಗಳ ಹುಡುಕಾಟ ಮುಂದುವರಿದಿದ್ದು, ಇದಕ್ಕಾಗಿ ೩೬೦ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ೨೧ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಬಹುತೇಕ ರಸ್ತೆಗಳು ಸಂಪೂರ್ಣ ಹಾನಿಯಾಗಿದ್ದು, ಕೋಟ್ಯಂತರ ರೂ. ನಷ್ಟ ಉಂಟಾಗಿದೆ ಎಂದು ಅವರು ಹೇಳಿದರು.

ಕುಂದಾಪುರ ತಾಲೂಕಿನಲ್ಲೂ ಮಳೆಯಿಂದ ೨.೫ಲಕ್ಷ ರೂ. ನಷ್ಟ ಉಂಟಾಗಿದ್ದು, ಹಲವು ಮನೆಗಳು ಕುಸಿದು ಬಿದ್ದಿವೆ ಎಂದು ನಾಗರಾಜ್ ಶೆಟ್ಟಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭಾಕರ್ ರಾವ್, ಗುಜ್ಜಾಡಿ ಪ್ರಭಾಕರ ನಾಯಕ್ ಉಪಸ್ಥಿತರಿದ್ದರು

Share: