ಕಾರವಾರ: ಧಾರವಾಡದಲ್ಲಿ ನಡೆದ ಪ್ಯಾನ್ ಇಂಡಿಯಾ ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಬಾಲಮಂದಿರ ಪ್ರೌಢಶಾಲೆಯ ದೈಹಿಕಶಿಕ್ಷಣ ಶಿಕ್ಷಕರಾದ ಶ್ರೀ ಪ್ರಶಾಂತ ಆರ್. ನಾಯ್ಕ ಇವರು 5 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದು ರಾಜ್ಯಕ್ಕೆ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.
ಇವರ ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತ ಮಂಡಳಿಯವರು ಹಾಗೂ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಶ್ರೀಮತಿ ಅಂಜಲಿ ಎಸ್. ಮಾನೆ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ. ಇವರಿಗೆ ಹಿರಿಯ ತರಬೇತುದಾರರಾದ ಶ್ರೀ ಪ್ರಕಾಶ ರೇವಣಕರ ರವರು ತರಬೇತಿ ನೀಡಿರುತ್ತಾರೆ.