ಕಾರವಾರ: ಜೂನ್ 12 ರಂದು ರಾಷ್ಟ್ರೀಯ ಯುವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನೆಹರು ಯುವ ಕೇಂದ್ರದ ವತಿಯಿಂದ ,ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಿದ್ದು, ಇಲ್ಲಿ ವಿಜೇತರಾದವರು ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
ರಾಜ್ಯ ಮಟ್ಟದ ವಿಜೇತರುಗಳಿಗೆ ಭಾರತ ಸರ್ಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ವತಿಯಿಂದ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ಜಿಲ್ಲಾ ಯುವ ಸಮನ್ವಯಾಧಿಕಾರಿ ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.