ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಧಿಕಾರಿಗೆ ಶಿಕ್ಷೆ ಪ್ರಕಟ

ಕಾರವಾರ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಧಿಕಾರಿಗೆ ಶಿಕ್ಷೆ ಪ್ರಕಟ

Sun, 01 Dec 2024 09:26:17  Office Staff   S O News

ಕಾರವಾರ: 2019 ರಲ್ಲಿ ಹಳಿಯಾಳದಲ್ಲಿ ಕೆಲಸ ಮಾಡುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಗಿರೀಶ ರಣದೇವ, ಜಮೀನು ಖಾತೆ ಬದಲಾವಣೆಗೆ ಹಣ ಪಡೆಯುತ್ತಿರುವಾಗ ಭ್ರಷ್ಠಚಾರ ನಿಗ್ರಹದಳ (ಎಸಿಬಿ) ಕೈಗೆ ಸಿಕ್ಕಿ ಬಿದ್ದಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾಗಿರುವುದರಿಂದ, ಆರೋಪಿಗೆ ಭ್ರಷ್ಟಚಾರ ಪ್ರತಿಭಂದಕ ಕಾಯ್ದೆ-1988 ರ ಕಲಂ 7, ರಡಿ 4 ವರ್ಷ ಕಠಿಣ ಶಿಕ್ಷೆ ಹಾಗೂ ರೂ.5 ಸಾವಿರ ದಂಡ ಹಾಗೂ ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 3 ತಿಂಗಳು ಶಿಕ್ಷೆ ವಿಧಿಸಿ ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ಡಿ.ಎಸ್. ವಿಜಯಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಹಿನ್ನಲೆ:- ಜಮೀನಿನ ಖಾತೆ ಬದಲಾವಣೆ ಮಾಡಿ ಕೊಡಲು ರೈತರೊಬ್ಬರಿಂದ ಗಿರೀಶ ರಣದೇವ ರೂ.3000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ರೈತ ರೂ.3000 ಲಂಚ ಪಡೆಯುವಾಗ ಟ್ರಾಪ್ ಕಾರ್ಯಚರಣೆಯಲ್ಲಿ ರಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುತ್ತಾರೆ. ಆಪಾದಿತ ನೌಕರರ ವಿರುದ್ದ ವಿಶೇಷ ಮತ್ತು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ, ಉತ್ತರ ಕನ್ನಡದಲ್ಲಿ ದೋμÁರೋಪಣ ಪತ್ರ ಸಲ್ಲಿಕೆಯಾಗಿ, ವಿಚಾರಣೆ ನಡೆಸಲಾಗಿತ್ತು.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಆಭಿಯೋಜಕ ಲಕ್ಷ್ಮಿಕಾಂತ ಎಮ್ ಪ್ರಭು ವಾದ ಮಂಡಿಸಿರುತ್ತಾರೆ.


Share: