ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

Mon, 06 May 2024 06:49:15  Office Staff   S O News

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುವಂತೆ, ಭಾನುವಾರ ಕಾರವಾರ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರಿಗೆ ಮತದಾನ ಜಾಗೃತಿಯ ಕರಪತ್ರ ಹಂಚುವ ಮೂಲಕ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮತದಾನದ ಮಹತ್ವದ ಕುರಿತಂತೆ ವಿವರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸ್ವೀಪ್ ಕಾರ್ಯಕ್ರಮದಡಿ ಮತದಾನ ಜಾಗೃತಿ ನಿಮಿತ್ತ ಆಯೋಜಿಸಲಾಗಿದ್ದ ವಾಕಥಾನ್ ಗೆ ನಗರದ ಜಿಲ್ಲಾ ಪಂಚಾಯತ್ ಕಛೇರಿಯ ಆವರಣದಲ್ಲಿ ಚಾಲನೆ ನೀಡಿದರು. 

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದ್ದು, ಶೇಕಡಾವಾರು ಪ್ರಮಾಣದಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿಯೇ ಅಗ್ರಸ್ಥಾನ ಪಡೆಯುವ ಭರವಸೆ ಇದೆ ಎಂದರು. 

ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ನೋಂದಾಯಿತ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಒದಗಿಸಿದ್ದ ಅವಕಾಶದಲ್ಲಿ ಈಗಾಗಲೇ 90% ಕ್ಕೂ ಅಧಿಕ ್ಟ ಮತದಾನವಾಗಿದೆ. ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯಾದ್ಯಂತ ಅದರಲ್ಲೂ ವಿಶೇಷವಾಗಿ ಕಡಿಮೆ ಮತದಾನವಾಗುವ ಪ್ರದೇಶಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಲಾಗಿದೆ. ಮತದಾರರೂ ಸಹ ಜಾಗೃತರಾಗಿದ್ದು ಮೇ 07 ರಂದು ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ 90 ರಿಂದ 95 % ಮತದಾನವಾಗಬಹುದೆಂದು ಅಂದಾಜಿಸಲಾಗಿದೆ ಎಂದು ಹೇಳಿದರು. 

ಜಿಲ್ಲಾ ಪಂಚಾಯತಿಯಿAದ ಆರಂಭವಾದ ವಾಕಥಾನ್ ಮಾರುಕಟ್ಟೆ ರಸ್ತೆ, ಸಿವಿಲ್ ಕೋರ್ಟ್ ರಸ್ತೆ, ಸವಿತಾ ಸರ್ಕಲ್, ಕಾರವಾರ - ಕೋಡಿಬಾಗ್ ಮುಖ್ಯ ರಸ್ತೆ, ಕಾಜುಬಾಗ ಕ್ರಾಸ್, ಪೊಲೀಸ್ ಕ್ವಾರ್ಟರ್ಸ್, ಪಾಲಿಟೆಕ್ನಿಕ್ ಕಾಲೇಜ್ ರಸ್ತೆ, ಸಿವಿಲ್ ಆಸ್ಪತ್ರೆ ರಸ್ತೆ ಮಾರ್ಗವಾಗಿ ಸಾಗಿ ಮರಳಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಂಪನ್ನಗೊAಡಿತು. 

ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಸೇರಿದಂತೆ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಬೀದಿ ಬದಿಯ ವ್ಯಾಪಾರಸ್ಥರು, ಅಂಗಡಿಕಾರರು, ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಚುನಾವಣೆಯ ಆಮಂತ್ರಣ ಪತ್ರ ನೀಡಿ, ಮತದಾನದ ದಿನ ತಪ್ಪದೇ ಮತ ಚಲಾಯಿಸುವಂತೆ ವಿನಂತಿಸಿಕೊAಡರು.

ವಾಕಥಾನ್ ನಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಚುನಾವಣೆ ಜಾಗೃತಿ ಸಂದೇಶದ ಟೀ ಶರ್ಟ್ ಧರಿಸಿ, ಮಾಹಿತಿ ಫಲಕ ಹಿಡಿದು, ಘೋಷÀಣೆ ಕೂಗುತ್ತಾ ಹೆಜ್ಜೆ ಹಾಕಿ, ಗಮನ ಸೆಳೆದರು. 

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಸಂತೆ ಮಾರುಕಟ್ಟೆ, ಗ್ರೀನ್ ಸ್ಟ್ರೀಟ್, ಸವಿತಾ ಹೊಟೆಲ್ ಸರ್ಕಲ್, ಮೀನು ಮಾರುಕಟ್ಟೆ, ಗೀತಾಂಜಲಿ ಥಿಯೇಟರ್, ಬಸ್ ನಿಲ್ದಾಣ, ಹೆಂಜಾ ನಾಯ್ಕ ಸರ್ಕಲ್ ಮತ್ತು ಸದಾಶಿವಗಡ ಮಾರುಕಟ್ಟೆ ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳಲ್ಲಿ ಆಮಂತ್ರಣ ಪತ್ರ ನೀಡಲಾಯಿತು.


Share: