ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃಧ್ದಿ,ಅರಣ್ಯ ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ, ಶಾಲ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಜಿಲ್ಲೆ ಮತ್ತು ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಭಾ ಕಾರ್ಯಕ್ರಮವು ಸೆಪ್ಟಂಬರ್ 15 ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾವರದ ಶ್ರೀ ಮೂಡ ಗಣಪತಿ ಸಭಾ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕುಮಟಾ ಶಾಸಕ ದಿನಕರ ಕೆ. ಶೆಟ್ಟಿ, ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಎಜೆನ್ಸಿಸ್ ಅಧ್ಯಕ್ಷ ಸತೀಶ್ ಕೆ. ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ, ಹೊನ್ನಾವರ ಪಟ್ಟಣ ಪಂಚಾಯತ್ ಅಧ್ಯಕ್ಷ ನಾಗರಾಜ ಪರಮೇಶ್ವರ ಭಟ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಅಂಕೋಲದ ಗೋಖಲೆ ಸೆಂಟನರಿ ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಲಿಂಗಸ್ವಾಮಿ ವಸ್ತçದ ಅವರು ಪ್ರಜಾಪ್ರಭುತ್ವದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ, ಮಾವಿನಕೊಪ್ಪ ಚೆಕ್ ಪೋಸ್ಟ್ ಹಳಿಯಾಳ ತಾಲೂಕಿನಿಂದ, ಯಲ್ಲಾಪುರ ತಾಲೂಕು, ಶಿರಸಿ ತಾಲೂಕು,ಕುಮಟಾ ತಾಲೂಕು, ಹೊನ್ನಾವರ ತಾಲೂಕು ಹಾಗೂ ಭಟ್ಕಳ ತಾಲೂಕಿನ ಗೊರಟೆ ಗ್ರಾಮದ ಉಡುಪಿ ಜಿಲ್ಲೆಯ ಗಡಿಯವರೆಗೆ 143 ಕಿಮೀ ಮಾನವ ಸರಪಳಿ ರಚಿಸಲಾಗುವುದು.