ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಯುವಜನತೆ ಶೇ.100 ರಷ್ಟು ಮತದಾನ ಮಾಡಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ: ಯುವಜನತೆ ಶೇ.100 ರಷ್ಟು ಮತದಾನ ಮಾಡಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Sat, 23 Mar 2024 18:59:16  Office Staff   S O News

ಕಾರವಾರ: ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಯುವ ಮತದಾರರು ಶೇ.100 ರಷ್ಟು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ಅವರು ಇಂದು ಮಾಜಾಳಿಯ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಮತ್ತು ಮಾಜಾಳಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ನಡೆದ ಸ್ವೀಪ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಲೋಕಸಭಾ ಚುನಾವಣೆಯಲ್ಲಿ, ಯುವ ಜನತೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಒಡ್ಡುವ ಯಾವುದೇ ಆಸೆ, ಆಮಿಷ, ಪ್ರಲೋಭನೆಗಳಿಗೆ ಒಳಗಾಗದೇ, ನಿರ್ಭೀತಿಯಿಂದ, ತಮಗೆ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಯೋಚಿಸಿ ಚಲಾಯಿಸುವ ಮೂಲಕ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮೇ 7 ರಂದು ಜಿಲ್ಲೆಯಲ್ಲಿನ ಎಲ್ಲಾ ಯುವ ಮತದಾರರು ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು. 

ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜಿ.ಸತೀಶ್, ಮಾಜಾಳಿ ಗ್ರಾ.ಪಂ. ಪಿಡಿಓ ರಾಜೇಶ್, ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲೆ ಶಾಂತಲಾ, ಪ್ರಾದ್ಯಾಪಕ ಮಿಥೇಶ್, ರತ್ನಾಕರ್, ಕಾಲೇಜಿನ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.


Share: