ಚಿಕ್ಕಬಳ್ಳಾಪುರ ಡಿಸೆಂಬರ್ ೦೩: ಗೌರಿಬಿದನೂರು ತಾಲ್ಲೂಕಿನ ತೊಂಡೆಬಾವಿ ಸಮೀಪ ನಿರ್ಮಿಸಿರುವ ಎಸಿಸಿ ಸಿಮೆಂಟ್ ಕೈಗಾರಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಡಿಸೆಂಬರ್ ೧೨ ರಂದು ಮಧ್ಯಾಹ್ನ ೧೨.೩೦ ಗಂಟೆಗೆ ಉದ್ಘಾಟಿಸುವರು.
ಉದ್ಯಮ ತರಬೇತಿ ಶಿಬಿರಕ್ಕೆ ಆಹ್ವಾನ
ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ೩ ವಾರಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ತರಬ್ಭೆತಿಯನ್ನು ಉದ್ಯಮ ಸ್ಥಾಪಿಸಲು ಜ್ಞಾಪನ ಪತ್ರ ಭಾಗ-೧ ಪಡೆದವರು ಹಾಗೂ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಸ್ಥಾಪಿಸಲು ಇಚ್ಚಿಸುವ ವಿದ್ಯಾವಂತ ಯುವಕರಿಗೆ ಹಮ್ಮಿಕೊಳ್ಳಲು ಉದ್ದೇಶಿಸಿದ್ದು ಸದರಿ ಕಾರ್ಯಕ್ರಮದಡಿಯಲ್ಲಿ ಕನಿಷ್ಠ ಎಸ್.ಎಸ್.ಎಲ್.ಸಿ. ಹಾಗೂ ಹೆಚ್ಚಿನ ವಿದ್ಯಾಭ್ಯಾಸ ಹೊಂದಿದ ಅಭ್ಯರ್ಥಿಗಳಿಗೆ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸಲು ಇರುವ ಅವಕಾಶಗಳು, ಯೋಜನೆಯ ಆಯ್ಕೆ, ವಿವಿಧ ಇಲಾಖೆಗಳಲ್ಲಿ/ಹಣಕಾಸು ಸಂಸ್ಥೆಗಳಿಂದ ಸಿಗುವ ಸೌಲಭ್ಯಗಳು, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಇತ್ಯಾದಿ ವಿಷಯಗಳ ಬಗ್ಗೆ ವಿವರವಾದ ತರಬೇತಿ ನೀಡಲಾಗುವುದು.
ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅವರ ವೈಯಕ್ತಿಕ ಮಾಹಿತಿಯನ್ನು ಒಳಗೊಂಡ ಅರ್ಜಿಯನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಚಿಕ್ಕಬಳ್ಳಾಪುರ ಇವರಿಗೆ ಡಿಸೆಂಬರ್ ೩೧ ರೊಳಗೆ ಸಲ್ಲಿಸಬೇಕೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ವಕ್ಕಲಿಗರ ಕಲ್ಯಾಣ ಮಂಟಪ ಪಕ್ಕ, ಚಿಕ್ಕಬಳ್ಳಾಪುರ ಅಥವಾ ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಸಂಪರ್ಕಿಸಬಹುದು.