ಕಾರವಾರ: ಕಾರವಾರ ಬಂದರಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರು ಬುಧವಾರ ಭೇಟಿ ನೀಡಿ, ಕಾರವಾರ ಬಂದರಿನ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿ, ಬ್ರೇಕ್ ವಾಟರ್ ನಿರ್ಮಾಣ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯಪುರ್, ಬಂದರು ನಿರ್ದೇಶಕ ಕರ್ನಾಟಕ ಜಲಸಾರಿಗೆ ಮಂಡಳಿಯ ಕ್ಯಾಪ್ಟನ್ ಸಿ.ಸ್ವಾಮಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಪ್ರಮಿತ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಇದ್ದರು.