ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕುಮಟಾ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಕುಮಟಾ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ

Thu, 11 Jul 2024 02:27:51  Office Staff   SOnews

ಕುಮಟಾ: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ಸೇತುವೆಗೆ ಢಿಕ್ಕಿ ಹೊಡೆದು ನದಿಗೆ ಬಿದ್ದ ಘಟನೆ ಹೊನ್ಮಂವ್ ಕ್ರಾಸ್ ಬಳಿ ಬುಧವಾರ ನಡೆಸಿದೆ.  

ಈ ಘಟನೆಯಿಂದ ಗ್ಯಾಸ್ ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಕುಮಟಾದ ಸರಕಾರ ಆಸ್ಪತ್ರೆಗೆ ದಾಖಲಿಸಲಾಗಿದೆ.  ಕುಮಟಾ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಕುಮಟಾದ ಹೊನ್ಮಂವ್ ಕ್ರಾಸ್ ಬಳಿ ತಲುಪುತ್ತಿದ್ದಂತೆ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಸೇತುವೆಗೆ ಢಿಕ್ಕಿ ಹೊಡೆದು ನದಿಯಲ್ಲಿ ಪಲ್ಪಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಟ್ಯಾಂಕರ್ ಮೇಲೆತ್ತುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ.


Share: