ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

Mon, 05 Aug 2024 02:44:34  Office Staff   S O News

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕರ್ನಾಟಕ ಸರ್ಕಾರವು ಕೆಇಎ (ಕರ್ನಾಟಕ ಪರಿಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯದ ಆಯೋಗದವರು ನಡೆಸಲಿರುವ ರಾಷ್ಟç ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ಆಗಸ್ಟ್ 09, 2024 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿAದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.  

ಹೆಚ್ಚಿನ ಮಾಹಿತಿಗಾಗಿ  0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
 


Share: