ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕೊಪ್ಪಳ: ಮುರುಕುಂಬಿ ದಲಿತ ದೌರ್ಜನ್ಯ ಪ್ರಕರಣ – 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಜನರಿಗೆ 5 ವರ್ಷ ಜೈಲು

ಕೊಪ್ಪಳ: ಮುರುಕುಂಬಿ ದಲಿತ ದೌರ್ಜನ್ಯ ಪ್ರಕರಣ – 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಜನರಿಗೆ 5 ವರ್ಷ ಜೈಲು

Fri, 25 Oct 2024 01:57:20  Office Staff   SOnews

 

ಕೊಪ್ಪಳ: 2015ರಲ್ಲಿ ಮುರುಕುಂಬಿ ಗ್ರಾಮದಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಮತ್ತು ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

9 ವರ್ಷಗಳ ನಂತರ ನ್ಯಾಯಾಧೀಶ ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಲಾಗಿದೆ.

ಈ ವೇಳೆ, ಮೂವರು ಅಪರಾಧಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವುದರಿಂದ ಜಾತಿ ನಿಂದನೆ ಕಾಯ್ದೆ ಅನ್ವಯವಾಗದೆ, ಅವರಿಗೆ 5 ವರ್ಷ ಜೈಲು ಹಾಗೂ 2,000 ರೂ. ದಂಡ ವಿಧಿಸಲಾಗಿದೆ.

ಪ್ರಕರಣದ ಹಿನ್ನೆಲೆ: 2015ರಲ್ಲಿ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ಕ್ಷೌರ ದಂಗಡಿ ಮತ್ತು ಹೋಟೆಲ್‌ಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಣೆ ಸಂಬಂಧ ಜಗಳ ಉಂಟಾಗಿ, ಸ್ಥಳೀಯರು ದಲಿತರ ಓಣಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಈ ಘಟನೆಗೆ ಸಂಬಂಧಿಸಿದಂತೆ 117 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಕೆಲ ಆರೋಪಿಗಳು ಸಾವನ್ನಪ್ಪಿದ್ದು, 101 ಜನರ ಮೇಲೆ ಆರೋಪ ಸಾಬೀತು ಆಗಿದೆ.

ತೀರ್ಪಿನ ಪ್ರಕಾರ, 98 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗಿದೆ.


Share: