ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಮಂಗಳೂರಿನಲ್ಲಿ ಫಲ ಪುಷ್ಪ ಪ್ರದರ್ಶನ

ಮಂಗಳೂರಿನಲ್ಲಿ ಫಲ ಪುಷ್ಪ ಪ್ರದರ್ಶನ

Sun, 21 Feb 2010 00:12:00  Office Staff   S.O. News Service


Kadri+Park1.jpg
 
 
 
 
 
 
 
 
 
 
 

Kadri+Park2.jpgಮಂಗಳೂರು ಫೆ, 19: ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಸಿರಿ ತೋಟಗಾರಿಕಾ ಸಂಘದ ಆಶ್ರಯದಲ್ಲಿ 2009 - 2010 ರ ಸಾಲಿನ ತೋಟಗಾರಿಕಾ ಫಲಪುಷ್ಪ ಪ್ರದರ್ಶನ ಮಂಗಳೂರಿನಲ್ಲಿ ಇಂದಿನಿಂದ ಆರಂಭ ಗೊಂಡಿದೆ. ಫೆಬ್ರವರಿ 23 ತನಕ ನಡೆಯುವ ಈ ಪ್ರದರ್ಶನದ ಉದ್ಘಾಟನಾ ಸಮಾರಂಭ ಕದ್ರಿ ಉದ್ಯಾನವನದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಭಂಡಾರಿ, ಶಾಸಕ ಯು.ಟಿ.ಖಾದರ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಎಚ್.ಎನ್.ಹೇಮಾ ಸೇರಿದಂತೆ ಅನೇಕ ಗಣ್ಯರು ಮತ್ತು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
 
 
 
 
ಸೌಜನ್ಯ: ವಾರ್ತಾ ಭವನ 

Share: