ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಮಂಗಳೂರು:ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಅಧಿಕೃತ ಆಹ್ವಾನ

ಮಂಗಳೂರು:ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಅಧಿಕೃತ ಆಹ್ವಾನ

Mon, 26 Apr 2010 13:09:00  Office Staff   S.O. News Service

ಮಂಗಳೂರು ಏಪ್ರಿಲ್ 26:ಏಪ್ರಿಲ್ 30 ರಂದು ಶುಕ್ರವಾರ ನಗರದ ಪುರಭವನದಲ್ಲಿ ಜರುಗಲಿರುವ ಮಂಗಳೂರು ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಬೋಲ ಚಿತ್ತರಂಜನ್ ದಾಸ್ ಶೆಟ್ಟಿ ಅವರನ್ನು ಇಂದು ನಗರದ ಮಹಾಪೌರರಾದ ರಜನಿ ದುಗ್ಗಣ್ಣ ಅವರು ವೀಳ್ಯ ಕೊಡುವ ಮೂಲಕ ಸಾಂಪ್ರಾದಾಯಿಕವಾಗಿ ಆಮಂತ್ರಿಸಿದರು.

 
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು,ಕಸಾಪ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ, ಉಪ ಮೇಯರ್ ರಾಜೇಂದ್ರ ,ಪಾಲಿಕೆ ಸದಸ್ಯರುಗಳಾದ ದಿವಾಕರ್,ಸುಧೀರ್ ಶೆಟ್ಟಿ ಕಣ್ಣೂರು,ಶಾಂತಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ಮಂಗಳೂರು ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸರ್ವೋತ್ತಮ ಅಂಚನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತಾಲೂಕು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಭುವನಾಭಿರಾಮ ಉಡುಪ ಅವರು ವಂದಿಸಿದರು.ಗಣೇಶ್ ಅಮೀನ್ ಸಂಕಮಾರ್ ಕಾರ್ಯಕ್ರಮ ನಿರೂಪಿಸಿದರು.
 
ಸೌಜನ್ಯ: ವಾರ್ತಾಭವನ

 

 

 

Share: