ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಸಾಮಾನ್ಯ ಪ್ರವೇಶ ಪರೀಕ್ಷೆಗೆ ಕ್ಷಣಗಣನೆ

ಸಾಮಾನ್ಯ ಪ್ರವೇಶ ಪರೀಕ್ಷೆಗೆ ಕ್ಷಣಗಣನೆ

Tue, 27 Apr 2010 17:56:00  Office Staff   S.O. News Service
ಬೆಂಗಳೂರು, ಏ.27 : ಪ್ರಸಕ್ತ ಸಾಲಿನ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏ.28 ಮತ್ತು 29 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಿದೆ. ಬೆಂಗಳೂರಿನ 58 ಸೇರಿದಂತೆ ರಾಜ್ಯದ ವಿವಿಧೆಡೆಯ 228 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. 

ರಾಜ್ಯದ ಒಟ್ಟು 1,15,843 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಬೆಂಗಳೂರಿನ 32,034 ಹಾಗೂ ರಾಜ್ಯ ವಿವಿಧೆಡೆಯ 83,809 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸುಮಾರು 15,000 ಮೇಲ್ವಿಚಾರಕರು ಪರೀಕ್ಷಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. 

ಗಡಿ ಕನ್ನಡಿಗರ ಕೋಟಾದಲ್ಲಿ 488, ಜಮ್ಮು ಮತ್ತು ಕಾಶ್ಮೀರ ವಲಸಿಗರ ಕೋಟಾದಡಿ 610 ಅಭ್ಯರ್ಥಿಗಳು ಪ್ರವೇಶ ಪರೀಕ್ಷೆ ಬರೆಯಲಿದ್ದಾರೆ. ಏ.28 ರಂದು ಮತ್ತು 29 ರಂದು ಒಟ್ಟು ಏರಡು ದಿನ 4 ವಿಷಯಗಳಿಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೆ 60 ಅಂಕ. 1 ಗಂಟೆ 20 ನಿಮಿಷ ಕಾಲಾವಕಾಶ ಇರುತ್ತದೆ. 

ಏ. 28 ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆ ನಡೆಯಲಿದೆ. ಏ. 29 ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಏ. 30ರಂದು ಬೆಳಗ್ಗೆ 11 ಗಂಟೆಗೆ ಗಡಿನಾಡ ಕನ್ನಡಿಗರಿಗೆ ಹಾಗೂ ಮಧ್ಯಾಹ್ನ 1 ಗಂಟೆಗೆ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ತಲುಪದಿರುವ ವಿದ್ಯಾರ್ಥಿಗಳು ಪ್ರಾಧಿಕಾರದ http://kea.kar.nic.in ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.

 


Share: