ಚಾಮರಾಜನಗರ, ಮಾ.೧೧ (ಕರ್ನಾಟಕ ವಾರ್ತೆ) - ಚಾಮರಾಜನಗರ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ.ಎಸ್.ಪ್ರಕಾಶ್ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾದ ಎನ್.ಟಿ. ಶಿವಕುಮಾರ್ ಅವರಿಂದ ಪ್ರಕಾಶ್ ಅಧಿಕಾರ ಸ್ವೀಕರಿಸಿದರು. ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು ಜಿಲ್ಲೆಯ ಹಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಇತರರೊಂದಿಗೆ ಚರ್ಚಿಸಿಗೆಹರಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಬಸವರಾಜು ಇದ್ದರು.